ದೇಶ

ಪುಲ್ವಾಮದಲ್ಲಿ ಸಿಆರ್'ಪಿಎಫ್ ಪಡೆ ಮೇಲೆ ಐಇಡಿ ದಾಳಿ: ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗಂಗೂ ಎಂಬ ಪ್ರದೇಶದಲ್ಲಿ ಸಿಆರ್'ಪಿಎಫ್ ಪಡೆ ಉಗ್ರರು ಐಇಡಿ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಪುಲ್ವಾಮದಲ್ಲಿ ಸಿಆರ್'ಪಿಎಫ್ ಪಡೆ ಮೇಲೆ ಐಇಡಿ ದಾಳಿ: ಓರ್ವ ಯೋಧನಿಗೆ ಗಾಯ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಗಂಗೂ ಎಂಬ ಪ್ರದೇಶದಲ್ಲಿ ಸಿಆರ್'ಪಿಎಫ್ ಪಡೆ ಉಗ್ರರು ಐಇಡಿ ದಾಳಿ ನಡೆಸಿದ್ದು, ಪರಿಣಾಮ ಓರ್ವ ಯೋಧ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. 

ಉಗ್ರರು ಐಇಡಿ ಸ್ಫೋಟಗೊಳಿಸುತ್ತಿದ್ದಂತೆಯೇ ಸ್ಧಳದಲ್ಲಿ ಯೋಧರು ಕೂಡಲೇ ಎಚ್ಚೆತ್ತುಕೊಂಡು ಉಗ್ರರಿಗೆ ದಿಟ್ಟ ಉತ್ತರ ನೀಡಿದ್ದಾರೆ. ಘಟನೆ ಬಳಿಕ ಉಗ್ರರು ತಲೆಮರೆಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರೆದಿದೆ. 

ಗಾಯಗೊಂಡಿರುವ ಯೋಧನನ್ನು ಸ್ಥಳೀಯ ಸೇನಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಗಾಯಗೊಂಡಿರುವ ಯೋಧನನ್ನು ಜಿಡಿ ಪ್ರದೀಸ್ ದಾಸ್ ಎಂದು ಗುರ್ತಿಸಲಾಗಿದೆ. ಯೋಧನ ಕೈಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.