ಕಾನ್ಪುರ ಎನ್ ಕೌಂಟರ್: ರೌಡಿ ಶೀಟರ್ ವಿಕಾಸ್ ದುಬೆ ಸಹಚರ ದಯಾಶಂಕರ್ ಅಗ್ನಿಹೋತ್ರಿ ಬಂಧನ
8 ಮಂದಿ ಪೊಲೀಸರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲು ಕಾರಣನಾದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯ ಸಹಚರ ದಯಾ ಶಂಕರ್ ಅಗ್ನಿಹೋತ್ರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾನ್ಪುರ: 8 ಮಂದಿ ಪೊಲೀಸರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲು ಕಾರಣನಾದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯ ಸಹಚರ ದಯಾ ಶಂಕರ್ ಅಗ್ನಿಹೋತ್ರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ರಾತ್ರಿ ಎನ್ ಕೌಂಟರ್ ಮತ್ತೆ ನಡೆದು ಇಂದು ನಸುಕಿನ ಜಾವ ಅಗ್ನಿಹೋತ್ರಿಯನ್ನು ಬಂಧಿಸಲಾಯಿತು ಎಂದು ಕಾನ್ಪುರ ಪೊಲೀಸರು ತಿಳಿಸಿದ್ದಾರೆ. ಎನ್ ಕೌಂಟರ್ ನಲ್ಲಿ ಅಗ್ನಿಹೋತ್ರಿಯ ಕಾಲಿಗೆ ಪೊಲೀಸರು ಗುಂಡಿಕ್ಕಿದ್ದಾರೆ. ಆತನ ಪತ್ತೆ ಹಚ್ಚಿದವರಿಗೆ 25 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಕಾನ್ಪುರ ವಲಯ ಪೊಲೀಸ್ ಮಹಾ ನಿರ್ದೇಶಕ ಮೊಹಿತ್ ಅಗರ್ ವಾಲ್ ತಿಳಿಸಿದ್ದಾರೆ.
ಪೊಲೀಸರು ಬಂಧಿಸಲು ಬರುತ್ತಿದ್ದ ವೇಳೆ ಆರೋಪಿ ಅಗ್ನಿಹೋತ್ರಿ ಗುಂಡಿನ ಮಳೆಗೈಯಲು ಆರಂಭಿಸಿದನು. ಅಗ್ನಿಹೋತ್ರಿ ಬಳಿಯಿಂದ ಪೊಲೀಸರು ಗನ್ ಮತ್ತು ಸಿಡಿಮದ್ದುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೆಲ ದಿನಗಳ ಹಿಂದೆ ನಡೆದ ಕಾನ್ಪುರ ಎನ್ ಕೌಂಟರ್ ನಲ್ಲಿ ವಿಕಾಸ್ ದುಬೆ ಮುಖ್ಯ ಆರೋಪಿಯಾಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ. ಪತ್ತೆಹಚ್ಚಿದವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನವನ್ನು ಉತ್ತರ ಪ್ರದೇಶ ಪೊಲೀಸರು ಘೋಷಿಸಿದ್ದಾರೆ.
ಈ ಮಧ್ಯೆ ವಿಕಾಸ್ ದುಬೆಗೆ ಸೇರಿದ ಮನೆಯನ್ನು ಪೊಲೀಸರು ಕೆಡವಿದ್ದು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


