ದೇಶ

10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ 

ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು.

10 ಸಾವಿರ ಹಾಸಿಗೆಯುಳ್ಳ ವಿಶ್ವದ ಅತೀ ದೊಡ್ಡ ಕೊರೋನಾ ಆರೈಕೆ ಕೇಂದ್ರ ಉದ್ಘಾಟನೆ 
ಕೊರೋನಾ ಆರೈಕೆ ಕೇಂದ್ರ, ದೆಹಲಿ
Published On :

ನವದೆಹಲಿ: ಛತರ್ಪುರದ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ನಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತೀದೊಡ್ಡ ಆರೈಕೆ ಕೇಂದ್ರ ಸರ್ದಾರ್ ಪಟೇಲ್ ಕೋವಿಡ್ ಆರೈಕೆ ಕೇಂದ್ರವನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್ ಬೈಜಾಲ್ ಅವರು ಭಾನುವಾರ ಉದ್ಘಾಟಿಸಿದರು. 

ಈ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಟ್ಟು 10,000 ಹಾಸಿಗೆಗಳಿದ್ದು, ಲಕ್ಷಣ ರಹಿತ ಕೊರೋನಾ ಸೋಂಕಿತರಿಗೆ ಇಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು. ಮನೆಯಲ್ಲಿ ಪ್ರತ್ಯೇಕ ವಾಸ ಮಾಡಲು ಸಾಧ್ಯವಾಗದಂತಹ ಲಕ್ಷಣ ರಹಿತ ಸೋಂಕಿತರಿಗೂ ಇಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. 

ಆರೈಕೆ ಕೇಂದ್ರವು 1,700 ಅಡಿ ಉದ್ದ, 700 ಅಡಿ ಅಗಲ- ಸರಿಸುಮಾರು 20 ಫುಟ್ಬಾಲ್ ಮೈದಾಸನಗಳಷ್ಟು ವಿಸ್ತಾರವಾಗಿದೆ. ಅಲ್ಲದೆ ಒಟ್ಟು 200 ಅಂಕಣಗಳನ್ನು ಒಳಗೊಂಡಿದ್ದು, ಇದರಲ್ಲಿ ತಲಾ 50 ಹಾಸಿಗೆಗಳನ್ನು ಹಾಕಲಾಗಿದೆ. ಇನ್ನು ದೆಹಲಿ ಸರ್ಕಾರವು ಆಡಲಿತಾತ್ಮಕ ಬೆಂಬಲವನ್ನು ನೀಡಿದರೆ, ಇಂಡೋ-ಟಿಬೆಟನ್ ಗಡಿ ಪೊಲೀಸ್ ಪಡೆ ಆರೈಕೆ ಕೇಂದ್ರದಲ್ಲಿ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ. ಕೇಂದ್ರದ ಕಾರ್ಯಗಳಲ್ಲಿ ರಾಧಾ ಸ್ವಾಮಿ ಸತ್ಸಂಗ್'ನ ಸ್ವಯಂ ಸೇವಕರು ಕೂಡ ಕೈಜೋಡಿಸಲಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.