ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹಾಲಿಂಗ ಆರತಿಯ ನೇರ ಪ್ರಸಾರಕ್ಕೆ ವ್ಯವಸ್ಥೆ!
ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕಾಶ್ಮೀರ: ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಯಾತ್ರಾರ್ಥಿಗಳಿಗೆ ನಿರ್ಬಂಧ ವಿಧಿಸಿರುವುದರಿಂದ ಅಮರನಾಥ ದೇವಾಲಯ ಮಂಡಳಿ, ಅಮರನಾಥ ಗುಹೆಯ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಡಿಡಿ ವಾಹಿನಿಯಲ್ಲಿ ಪ್ರಸಾರ ಮಾಡಲು ನಿರ್ಧರಿಸಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ನಡೆಸಿದೆ.
ಈ ಹಿಂದಿನ ಯೋಜನೆಯ ಪ್ರಕಾರ ಜಮ್ಮು-ಕಾಶ್ಮೀರ ಆಡಳಿತ ಅಮರನಾಥ ಯಾತ್ರೆಯ ವೇಳೆ 500 ಯಾತ್ರಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸುವುದಕ್ಕೆ ನಿರ್ಧರಿಸಿತ್ತು. ಟ್ವಿನ್ ಟ್ರ್ಯಾಕ್ ನ ಅನಂತ್ ನಾಗ್ ನ ಪಹಲ್ಗಾಮ್ ಹಾಗೂ ಗಂದೇರ್‌ಬಾಲ್ ಜಿಲ್ಲೆಯ ಬಲ್ಟಾಲ್ ನ ಮೂಲಕ ಜೂ.23 ರಿಂದ ಯಾತ್ರಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿತ್ತು. ಆಷಾಢ ಪೂರ್ಣಿಮೆಯ ದಿನದಂದು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗೌರ್ನರ್ ಜಿಸಿ ಮುರ್ಮು ಅಮರನಾಥ ಗುಹೆಯಲ್ಲಿ ಪ್ರಥಮ ಆರತಿಯನ್ನು ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


