ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ, ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ!
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

ಗ್ವಾಲಿಯರ್: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.
ಹೌದು.. ಕೊರೋನಾ ಸಾಂಕ್ರಾಮಿಕ ಸಂಕಷ್ಟದಲ್ಲಿರುವ ಭಾರತದಲ್ಲಿ ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೂ ಸಾರ್ವಜನಿಕರ ಬೆಂಬಲವಿಲ್ಲದೇ ಭಾರತ ಕೊರೋನಾ ವಿರುದ್ಧದ ಹೋರಾಟದಲ್ಲಿ ಹಿಂದೆ ಬೀಳುತ್ತಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳನ್ನು ಜನ ಮರೆಯುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹ ವ್ಯಕ್ತಿಗಳನ್ನು ಆಸ್ಪತ್ರೆಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುವ ಶಿಕ್ಷೆ ವಿಧಿಸುತ್ತಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲದೇ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿಯೂ ಇವರನ್ನು ಸ್ವಯಂಸೇವಕರಾಗಿ ಕೆಲಸ ಮಾಡಲು ನಿಯೋಜಿಸಲಾಗುತ್ತಿದ್ದು, ಇದರ ಜೊತೆಗೆ ದಂಡ ಕೂಡ ಹಾಕಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು, ಕೊರೋನಾ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಜನರಿಂದ ಮಾರ್ಗದರ್ಶಿ ಸೂತ್ರಗಳ ಪಾಲನೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಸಾರ್ವಜನಿಕರು ಅದಕ್ಕೆ ಬೆಂಬಲ ನೀಡದ ಹೊರತು ಅದು ಯಶಸ್ವಿಯಾಗುವುದಿಲ್ಲ. ಇದೇ ಕಾರಣಕ್ಕೆ ಹಾಲಿ ಇರುವ ನಿಯಮಗಳನ್ನೇ ಇನ್ನೂ ಕಠಿಣ ಮಾಡಲಾಗುತ್ತಿದೆ.
ಅದರ ಮೊದಲ ಭಾಗವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹವರನ್ನು ಕನಿಷ್ಟ 3 ದಿನಗಳ ಕಾಲ ಆಸ್ಪತ್ರೆಗಳಲ್ಲಿ , ಫೀವರ್ ಕ್ಲಿನಿಕ್ ಗಳಲ್ಲಿ ಮತ್ತು ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ. ಇದರ ಜೊತೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ. ಇದೇ ವೇಳೆ ಇಂದೋರ್, ಭೋಪಾಲ್, ಮತ್ತು ಇತರೆ ರಾಜ್ಯಗಳಿಂದ ಗ್ವಾಲಿಯರ್ ಗೆ ಆಗಮಿಸುವವರನ್ನು ಗಡಿಯಲ್ಲೇ ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


