ಪುಲ್ವಾಮದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಪುಲ್ವಾಮದ ಗೂಸು ಎಂಬ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚಱಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಪರಿವರ್ತಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದು ಎನ್'ಕೌಂಟರ್ ನಡೆಸಿದ್ದಾರೆ. ಪರಿಣಾಮ ಇದೀಗ ಓರ್ವ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳದಲ್ಲಿ ಇನ್ನೂ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


