ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್: ನಕಲಿ ಸುದ್ದಿ ಬರೆದಿದ್ದ ಪತ್ರಕರ್ತನ ಬಂಧನ
ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.

ಹೈದರಾಬಾದ್ : ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಕೊರೋನೋ ಸೋಂಕು ತಗುಲಿದೆ ಎಂಬ ಸುಳ್ಳು ಸುದ್ದಿ ಬರೆದಿದ್ದ ಹಿನ್ನೆಲೆಯಲ್ಲಿ ಜುಬಿಲಿ ಹಿಲ್ಸ್ ಪೊಲೀಸರು ಸ್ಥಳೀಯ ದಿನಪತ್ರಿಕೆ ‘ಆದಾಬ್ ಹೈದರಾಬಾದ್’ ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಅನಮ್ಚಿನ್ನಿ ವೆಂಕಟೇಶ್ವರ ರಾವ್ ಅವರನ್ನು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಸೋಮವಾರ ಬೆಳಗ್ಗೆ ವಾಕಿಂಗ್ ಗೆ ತೆರಳಿದ್ದ ಪತ್ರಕರ್ತನನ್ನು ಖಮ್ಮಾನ್ ನಿಂದ ವಶಕ್ಕೆ ಪಡೆದುಕೊಳ್ಳಲಾಗಿದ್ದು ವಿಚಾರಣೆಗಾಗಿ ಹೈದಾರಾಬಾದ್ ಗೆ ಕರೆದೊಯ್ಯಲಾಗಿದೆ,
ಜ್ಯುಬಿಲಿ ಹಿಲ್ಸ್ ನ ರಹಮತ್ ನಗರ ನಿವಾಸಿ ಇಲಿಯಾಸ್ ಎಂಬುವರು ನೀಡಿದ್ದ ದೂರಿನ ಮೇರೆಗೆ ಪತ್ರಕರ್ತನನ್ನು ಬಂಧಿಸಲಾಗಿದೆ, ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವರದಿ ಮಾಡಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


