ಮರ್ಕಜ್ ನಿಜಾಮುದ್ದೀನ್ ಗೆ ತೆರಳಿದ್ದ 122 ಮಲೇಷಿಯನ್ನರಿಗೆ ಜಾಮೀನು!
ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘನೆ ಮಾಡಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ನವದೆಹಲಿ: ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ವಿಧಿಸಿದ್ದ ನಿರ್ಬಂಧಗಳನ್ನು ಉಲ್ಲಂಘನೆ ಮಾಡಿ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 122 ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ದೆಹಲಿಯ ಚೀಫ್ ಮೆಟ್ರೋಪಾಲಿಟನ್ ನ್ಯಾಯಾಧೀಶರು ಮಲೇಷಿಯನ್ನರಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಕೇಂದ್ರ ಸರ್ಕಾರದ ಲಾಕ್ ಡೌನ್ ನಿರ್ಬಂಧಗಳ ಹೊರತಾಗಿಯೂ ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿ, ಅಕ್ರಮ ಮಿಷನರಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ, ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ಆರೋಪವನ್ನು ಇವರುಗಳ ವಿರುದ್ಧ ಹೊರಿಸಲಾಗಿತ್ತು.
ಈಗ 10,000 ರೂಪಾಯಿ ವೈಯಕ್ತಿಕ ಬಾಂಡ್ ನೀಡಲು ಸೂಚನೆ ನೀಡಿರುವ ದೆಹಲಿ ಕೋರ್ಟ್ 122 ಜನ ವಿದೇಶಿಗರಿಗೆ ಜಾಮೀನು ಮಂಜೂರು ಮಾಡಿದೆ.
ಇದೇ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು ಶಿಕ್ಷೆಯ ಅವಧಿ ಕಡಿಮೆ ಮಾಡಿಸಬೇಕು ಹಾಗೂ ಈ ಪ್ರಕರಣವನ್ನು ಅತಿ ಶೀಘ್ರವೇ ಇತ್ಯರ್ಥಗೊಳಿಸಬೇಕೆಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ತ್ ಮಾಲಿಕ್ ಗೆ ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ಜು.08 ಕ್ಕೆ ನಿಗದಿಪಡಿಸಲಾಗಿದೆ. ಎಲ್ಲಾ ವಿದೇಶಿ ನಾಗರಿಕರು ಹೊಟೆಲ್ ನಲ್ಲಿದ್ದು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರುಪಡಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


