ಕೋವಿಡ್-19: ಪ್ಲಾಸ್ಮಾ ದಾನ ಪ್ರೋತ್ಸಾಹಿಸಲು ಫ್ಲೆಕ್ಸ್ ಬೋರ್ಡ್'ಗಳನ್ನು ಹಾಕಿ; ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಸೂಚನೆ
ಕೊರೋನಾದಿಂದ ಗುಣಮುಖರಾದ ಜನರು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ಆಸ್ಪತ್ರೆಗಳಲ್ಲಿ ಫ್ಲೆಕ್ಸ್ ಬೋರ್ಡ್ ಗಳನ್ನು ಹಾಕಿ ಎಂದು ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.

ನವದೆಹಲಿ: ಕೊರೋನಾದಿಂದ ಗುಣಮುಖರಾದ ಜನರು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ಆಸ್ಪತ್ರೆಗಳಲ್ಲಿ ಫ್ಲೆಕ್ಸ್ ಬೋರ್ಡ್ ಗಳನ್ನು ಹಾಕಿ ಎಂದು ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಮಂಗಳವಾರ ಸೂಚನೆ ನೀಡಿದೆ.
ಕೊರೋನಾ ವೈರಸ್ ನಿಂದ ಚೇತರಿಸಿಕೊಂಡ ಜನರು ಇತರೆ ಸೋಂಕಿತರಿಗೆ ಸಹಾಯ ಮಾಡಲು ಪ್ಲಾಸ್ಮಾ ದಾನ ಮಾಡುವಂತೆ ಪ್ರೋತ್ಸಾಹಿಸಲು ರಾಷ್ಟ್ರರಾಜಧಾನಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಫ್ಲೆಕ್ಸ್ ಬೋರ್ಡ್ ಗಳನ್ನು ಹಾಕಬೇಕು. ಆಸ್ಪತ್ರೆಗಳ ಮುಖ್ಯದ್ವಾರದಲ್ಲಿಯೇ ಬೋರ್ಡ್ ಗಳನ್ನು ಹಾಕುವಂತೆ ಆಸ್ಪತ್ರೆಗಳಿಗೆ ದೆಹಲಿ ಸರ್ಕಾರ ಆದೇಶಿಸಿದೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 1,00,823ಕ್ಕೆ ಏರಿಕೆಯಾಗಿದ್ದು, 3,115 ಮಂದಿ ಈ ವರೆಗೂ ಮಹಾಮಾರಿಗೆ ಬಲಿಯಾಗಿದ್ದಾರೆ. 1,00,823 ಮಂದಿ ಸೋಂಕಿತರ ಪೈಕಿ 72,088 ಸೋಂಕಿನಿಂದ ಗುಣಮುಖರಾಗಿದ್ದಾರೆಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


