ದೇಶ

ತಮಿಳುನಾಡಿನ ಮತ್ತೊಬ್ಬ ಸಚಿವರಿಗೆ ಕೊರೋನಾ ಪಾಸಿಟಿವ್, ಇದುವರೆಗೆ 11 ಶಾಸಕರಿಗೆ ಸೋಂಕು ದೃಢ

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಮತ್ತೊಬ್ಬ ಸಚಿವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ತಮಿಳುನಾಡಿನ ಮತ್ತೊಬ್ಬ ಸಚಿವರಿಗೆ ಕೊರೋನಾ ಪಾಸಿಟಿವ್, ಇದುವರೆಗೆ 11 ಶಾಸಕರಿಗೆ ಸೋಂಕು ದೃಢ
ಸೆಲ್ಲೂರ್ ಕೆ ರಾಜು
Published On :

ಚೆನ್ನೈ: ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ ಮತ್ತೊಬ್ಬ ಸಚಿವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ.

ತಮಿಳುನಾಡು ಸಹಕಾರ ಸಚಿವ ಸೆಲ್ಲೂರ್ ಕೆ ರಾಜು ಅವರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಮಿಳುನಾಡಿನಲ್ಲಿ ಇದುವರೆಗೆ ಮೂವರು ಸಚಿವರು ಹಾಗೂ 11 ಶಾಸಕರಿಗೆ ಕೊರೋನಾ ವಕ್ಕರಿಸಿದೆ. ಇದಕ್ಕು ಮುನ್ನ ಇಂಧನ ಸಚಿವ ಪಿ ತಂಗಮಣಿ ಮತ್ತು ಉನ್ನತ ಶಿಕ್ಷಣ ಸಚಿವ ಕೆ ಪಿ ಅನ್ಬಳಗನ್ ಅವರಿಗೆ ಪಾಸಿಟಿವ್ ದೃಢಪಟ್ಟಿದೆ.

ಕೆಲವು ದಿನಗಳ ಹಿಂದೆ ಮಾಜಿ ಸಚಿವ ಹಾಗೂ ಎಐಎಡಿಎಂಕೆ ಹಿರಿಯ ಮುಖಂಡ ಬಿ ವಲರ್ಮತಿ ಅವರಿಗೆ ಹಾಗೂ ಎಐಎಡಿಎಂಕೆ ಶಾಸಕ ಕೆ ಪಳನಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.