ದೇಶದಲ್ಲಿ ಕೊರೋನಾ ಗುಣಮುಖ ಪ್ರಮಾಣ ಶೇ 62.78 ಕ್ಕೆ ಏರಿಕೆ, 5 ಲಕ್ಷ ಗಡಿ ದಾಟಿದ ಗುಣಮುಖರ ಸಂಖ್ಯೆ
ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಇತ್ತ ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕಿನಿಂದ ಗುಣಮುಖರ ಪ್ರಮಾಣ ಕೂಡ ಏರಿಕೆಯಾಗಿದೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಇತ್ತ ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕಿನಿಂದ ಗುಣಮುಖರ ಪ್ರಮಾಣ ಕೂಡ ಏರಿಕೆಯಾಗಿದೆ.
ದೇಶದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಗುಣಮುಖರಾಗುತ್ತಿರುವ ಪ್ರಮಾಣ ಶೇ 62.78 ಕ್ಕೆ ಏರಿಕೆಯಾಗಿದೆ. ಆಶಾದಾಯಕ ಬೆಳವಣಿಗೆ ಎಂದರೆ ದೇಶಾದ್ಯಂತ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ. ಒಟ್ಟು 5,15,386 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲಿ 16,872 ಜನರು ಗುಣಮುಖರಾಗಿದ್ದಾರೆ.
ಲಡಖ್, ಛತ್ತೀಸ್ಗಢ, ಉತ್ತರಾಖಂಡ್, ದೆಹಲಿ ಮತ್ತು ರಾಜಸ್ಥಾನದಲ್ಲಿ ಚೇತರಿಕೆ ದರ ಶೇಕಡ 76 ಕ್ಕಿಂತ ಹೆಚ್ಚಿದೆ. ಕೊರೋನಾ ಸೋಂಕಿನಿಂದ ಗುಣಮುಖರಾದ ರಾಜ್ಯಗಳ ಪೈಕಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿದ್ದರೆ, ದೆಹಲಿ ಎರಡು ಮತ್ತು ತಮಿಳುನಾಡು ಮೂರನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


