ದೇಶ

ಭಾರತದಲ್ಲಿ ಒಂದೇ ದಿನ ದಾಖಲೆಯ 27,114 ಕೊರೋನಾ ಕೇಸ್, 22,123 ಮಂದಿ ಸಾವು; ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾರ ಶನಿವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಒಂದೇ ದಿನ ದಾಖಲೆಯ 27,114 ಕೊರೋನಾ ಕೇಸ್, 22,123 ಮಂದಿ ಸಾವು; ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾರ ಶನಿವಾರ ಮಾಹಿತಿ ನೀಡಿದೆ. 

ಶನಿವಾರ ಮತ್ತೆ ದಾಖಲೆಯ 27,114 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,20,916ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಒಂದೇ ದಿನ 519 ಮಂದಿ ಬಲಿಯಾಗಿದ್ದು, ಮೃತರ ಸಂಖ್ಯೆ 22,123ಕ್ಕೆ ಏರಿಕೆಯಾಗಿದೆ. 

ಕಳೆದ ನಾಲ್ಕು ದಿನಗಳಿಂದ 25 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿವೆ. ಶುಕ್ರವಾರ ಕೂಡ 26,506 ಪ್ರಕರಣ ದಾಖಲಾಗಿದ್ದು. ಈ ವರೆಗಿನ ದೈನಂದಿನ ಗರಿಷ್ಟ ಎನಿಸಿಕೊಂಡಿತ್ತು. ಇಂದು ಕೂಡ 27,114 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 

ಕೊರೋನಾ ಪ್ರಕರಣ 7 ರಿಂದ 8 ಲಕ್ಷಕ್ಕೆ ಕೇವಲ 4 ದಿನದಲ್ಲಿ ಏರಿಕೆಯಾಗಿದೆ. ಇದೇ ವೇಳೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 238461ಕ್ಕೆ ಏರಿಕೆಯಾಗಿದೆ. 

ಇನ್ನು 8,20,916 ಮಂದಿ ಸೋಂಕಿತರ ಪೈಕಿ 5,15,386 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 2,83,407 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.