ತಮಿಳುನಾಡು ಸಚಿವ ಸೆಲ್ಲೂರು ಕೆ.ರಾಜು ಗೆ ಕೊರೋನಾ ಪಾಸಿಟಿವ್!
ತಮಿಳುನಾಡು ಸಹಕಾರ ಸಚಿವ ಸೆಲ್ಲೂರು ಕೆ. ರಾಜು ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಚೆನ್ನೈ: ತಮಿಳುನಾಡು ಸಹಕಾರ ಸಚಿವ ಸೆಲ್ಲೂರು ಕೆ. ರಾಜು ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಮಿಳುನಾಡಿನಲ್ಲಿ ಶುಕ್ರವಾರ 3,680 ಹೊಸ ಪ್ರಕರಣಗಳು ದಾಖಲಾಗಿವೆ. ಚೆನ್ನೈನಲ್ಲಿ 1,205 ಕೇಸ್ ಪತ್ತೆಯಾಗಿದ್ದು 27 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೆತಮಿಳುನಾಡಿನಲ್ಲಿ ಒಟ್ಟು 3 ಸಚಿವರಿಗೆ ಕೋವಿಡ್ ತಗುಲಿದಂತಾಗಿದೆ.
ಈ ಹಿಂದೆ ಇಂಧನ ಸಚಿವ ಪಿ. ತಂಗಮಣಿ ಮತ್ತು ಉನ್ನತ ಶಿಕ್ಷಣ ಸಚಿವ ಕೆ.ಪಿ. ಅನ್ಬಳಗನ್ ಕೊರೊನಾ ಸೋಂಕಿತರಾಗಿದ್ದರು. ಇವರನ್ನು ಹೊರತುಪಡಿಸಿ ಇಲ್ಲಿಯವರೆ ಒಟ್ಟು 8 ಶಾಸಕರಿಗೂ ಕೊರೊನಾ ಸೋಂಕು ತಗುಲಿದೆ.
ಇನ್ನು ಡಿಎಂಕೆ ಶಾಸಕರಾದ ಕೆ.ಎಸ್. ಮಸ್ತಾನ್, ಆರ್‌ಟಿ ಅರಸು, ವಾಸನಾಥಮ್ ಕೆ ಕಾರ್ತಿಕೇಯನ್, ಜೆ ಅನ್ಬಳಗನ್ ಅವರ ಕೊರೊನಾ ವರದಿಯೂ ಪಾಸಿಟಿವ್ ಬಂದಿತ್ತು. ಇದರಲ್ಲಿ ಅನ್ಬಳಗನ್ ಕಳೆದ ತಿಂಗಳು ಸೋಂಕಿನಿಂದ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


