ಗುಜರಾತ್: ಭಾವನಗರದ ಸಿಹೋರ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಅಪವಿತ್ರ
ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾವನಗರ: ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಯಾರೊ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಗೆ ಬಕೆಟ್ ಹಾಕಿ, ಅದರ ಹತ್ತಿರ ಮದ್ಯದ ಖಾಲಿ ಬಾಟಲಿ ಇಟ್ಟಿದ್ದರು. ಸೋಮವಾರ ಮಧ್ಯರಾತ್ರಿಯಿಂದ ಬೆಳಗ್ಗೆ 8 ಗಂಟೆಯ ನಡುವಣ ಈ ಕೃತ್ಯವೆಸಗಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುತ್ತಮುತ್ತಲಿನ ಜನರು ಬೆಳಿಗ್ಗೆ ಸಿಹೋರ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದ ನಂತರ ಪ್ರತಿಮೆಯನ್ನು ಅಪವಿತ್ರಗೊಳಿಸಿದ್ದಕ್ಕಾಗಿ
ಐಸಿಸಿ ಸೆಕ್ಷನ್ 295 ರ ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ಎಫ್ ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ನಂತರ ಜನರು ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


