ದೇಶ

ಭಾರತದಾದ್ಯಂತ 24 ಗಂಟೆಗಳಲ್ಲಿ 2,86,247 ಕೋವಿಡ್ ಪರೀಕ್ಷೆ, ಜುಲೈ 13ರ ವರಗೆ ಒಟ್ಟಾರೆ 1,20,92,503 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಭಾರತದಾದ್ಯಂತ 24 ಗಂಟೆಗಳಲ್ಲಿ 2,86,247 ಕೋವಿಡ್ ಪರೀಕ್ಷೆ, ಜುಲೈ 13ರ ವರಗೆ ಒಟ್ಟಾರೆ 1,20,92,503 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಸಂಗ್ರಹ ಚಿತ್ರ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,86,247 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.13ರೆಗೂ 1,20,92,503 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 28,498 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ ಗಡಿದಾಟಿದೆ. 

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಮತ್ತೆ 6497 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,60,924ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ 193 ಮಂದಿ ಬಲಿಯಾಗಿದ್ದು, ಈ ವರೆಗೆ ಈ ಸೋಂಕಿಗೆ ಒಟ್ಟು 10,482 ಮಂದಿ ಸಾವನ್ನಪ್ಪಿದ್ದಾರೆ. 

ಉಳಿದಂತೆ ತಮಿಳುನಾಡಿನಲ್ಲಿ 4328, ಕರ್ನಾಟಕದಲ್ಲಿ 2738, ಆಂಧ್ರಪ್ರದೇಶದಲ್ಲಿ 1935, ಉತ್ತರಪ್ರದೇಶದಲ್ಲಿ 1654, ಪಶ್ಚಿಮ ಬಂಗಾಳದಲ್ಲಿ 1435 ಹಾಗೂ ದೆಹಲಿಯಲ್ಲಿ 1246 ಸೋಮವಾರ ದಾಖಲಾದ ಗರಿಷ್ಠ ಪ್ರಮಾಣದ ಸೋಂಕು ಪ್ರಕರಣಗಳಾಗಿವೆ. ಮತ್ತೊಂದೆಡೆ ಕರ್ನಾಟಕದಲ್ಲಿ 73, ತಮಿಳುನಾಡಿನಲ್ಲಿ 66, ದೆಹಲಿಯಲ್ಲಿ 40, ಆಂಧ್ರಪ್ರದೇಶದಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.