ವಿಶಾಖಪಟ್ಟಣದಲ್ಲಿ ಮತ್ತೊಂದು ದುರಂತ: ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ; ಓರ್ವನಿಗೆ ಗಾಯ
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪರವಾಡ ಬಳಿ ಇರುವ ಜೆ.ಎನ್ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ಸೋಮವಾರ ಬೃಹತ್ ಸ್ಫೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪರವಾಡ ಬಳಿ ಇರುವ ಜೆ.ಎನ್ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ಸೋಮವಾರ ಬೃಹತ್ ಸ್ಫೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ.
ಸ್ಫೋಟ ಸಂಭವಿಸಿದಾಗ ಘಟಕದಲ್ಲಿ ಒಟ್ಟು ಆರು ಕಾರ್ಮಿಕರಿದ್ದು ಉಳಿದ ಐವರು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಕೆಲ ತಿಂಗಳ ಹಿಂದೆ ಎಲ್‌ಜಿ ಪಾಲಿಮರ್ಸ್ ಕೈಗಾರಿಕೆಯಿಂದ ವಿಷಾನಿಲ ಸೋರಿಕೆಯಾಗಿ ಹಲವರು ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ನಡದಿರುವ ಘಟನೆಯು ಪರವಾಡಾ ಪ್ರದೇಶದ ನಿವಾಸಿಗಳಲ್ಲಿ ಆತಂಕ ಉಂಟುಮಾಡಿದೆ.
ಕೈಗಾರಿಕೆಯಲ್ಲಿ ಮೊದಲು ಸ್ಫೋಟ ಸಂಭವಿಸಿದೆ, ಸುಮಾರು 15 ಬಾರಿ ಸ್ಫೋಟದ ಸದ್ದು ಕೇಳಿಸಿದೆ. ಸಾಗರ ತ್ಯಾಜ್ಯ ನಿರ್ವಹಣೆ ಮಾಡಲಾಗುವ ರಾಮ್‌ಕಿ ದ್ರಾವಕಗಳ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಭಾರಿ ಪ್ರಮಾಣದ ಬೆಂಕಿಯನ್ನು ನಂದಿಸಲು ಮತ್ತು ಸುತ್ತಮುತ್ತಲಿನ ಇತರ ಔಷಧ ಕಾರ್ಖಾನೆಗಳಿಗೆ ಬೆಂಕಿ ಹರಡದಂತೆ ತಡೆಯಲು 10 ಅಗ್ನಿಶಾಮಕ ವಾಹನಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಂದ್ ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ಸೇವೆಗಳು ಮತ್ತು ಆರೋಗ್ಯ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಮತ್ತು ಯಾವುದೇ ಪ್ರಾಣಹಾನಿ ಸಂಭವಿಸದಂತೆ ನೋಡಿಕೊಳ್ಳುವಂತೆ ವಿಶಾಖಪಟ್ಟಣ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಮೀನಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


