ಮಹಾರಾಷ್ಟ್ರ: ಒಂದೇ ದಿನ 7,975 ಹೊಸ ಪ್ರಕರಣ ಪತ್ತೆ, 213 ಬಲಿ; 2,75,640ಕ್ಕೇರಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.

ಮುಂಬೈ: ಭಾರತದಲ್ಲಿ ಕೊರೋನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7,975 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 2,75,640ಕ್ಕೇರಿದೆ.
ಈ ಬಗ್ಗೆ ಮಹಾರಾಷ್ಟ್ರದ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಂಗಳವಾರ ಒಂದೇ ದಿನ 7,975 ಕೊರೋನಾ ವೈರಸ್ ಕೇಸ್ಗಳು ಪತ್ತೆಯಾಗಿದ್ದು, ಆ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 2,75,640ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿಗೆ 233 ಮಂದಿ ಬಲಿಯಾಗಿದ್ದು, ಆ ಮೂಲಕ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 10928ಕ್ಕೆ ಏರಿಕೆಯಾಗಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 1,52,613ಕ್ಕೆ ಏರಿಕೆಯಾಗಿದೆ. ಅಂತೆಯೇ ಪ್ರಸ್ತುತ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,11,801 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಶೇ.55.37ಕ್ಕೆ ಏರಿಕೆಯಾಗಿದ್ದು, ಮರಣ ಪ್ರಮಾಣ ಶೇ.3.96ರಷ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


