ಕಣಿವೆಯಲ್ಲಿ ಮತ್ತೆ ಉಗ್ರರ ಉಪಟಳ: ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಮುಖಂಡನ ಅಪಹರಣ!
ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಸದಸ್ಯ ಮತ್ತು ವಾಟರ್‌ಗಮ್ ಮುನ್ಸಿಪಲ್ ಕಮಿಟಿಯ ಉಪಾಧ್ಯಕ್ಷ ಮೆರಾಜ್-ಉದ್-ದಿನ್ ಮಲ್ಲಾ ಅವರನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ.

ಶ್ರೀನಗರ: ಉತ್ತರ ಕಾಶ್ಮೀರದ ಸೊಪೋರ್‌ನಲ್ಲಿ ಬುಧವಾರ ಬೆಳಿಗ್ಗೆ ಬಿಜೆಪಿ ಸದಸ್ಯ ಮತ್ತು ವಾಟರ್‌ಗಮ್ ಮುನ್ಸಿಪಲ್ ಕಮಿಟಿಯ ಉಪಾಧ್ಯಕ್ಷ ಮೆರಾಜ್-ಉದ್-ದಿನ್ ಮಲ್ಲಾ ಅವರನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದಾರೆ.
ಮಲ್ಲಾ ಅವರನ್ನು ಪತ್ತೆಹಚ್ಚಲು ಬೃಹತ್ ಪ್ರಮಾಣದ ಶೋಧಕಾರುಅ ನಡೆಯುತ್ತಿದೆ. ಹಲವಾರು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಬಂಡಿಪೋರಾ ಜಿಲ್ಲೆಯಲ್ಲಿ ಬಿಜೆಪಿ ನಾಯಕ ವಾಸಿಮ್ ಬ್ಯಾರಿ, ಅವರ ತಂದೆ ಮತ್ತು ಸಹೋದರನನ್ನು ಭಯೋತ್ಪಾದಕರು ಕೊಂದ ಕೆಲವೇ ದಿನಗಳ ನಂತರ ಈ ಘಟನೆ ನಡೆದಿದೆ.
ವಾಸಿಮ್ ಬ್ಯಾರಿ ಅವರ ಕುಟುಂಬ ಸದಸ್ಯರ ಹತ್ಯೆ ಲಷ್ಕರ್-ಎ-ತೋಯಿಬಾ ಸಂಘಟನೆಯ ಒಂದು ಪೂರ್ವ ಯೋಜಿತ ಕೃತ್ಯವೆಂದು ಪೊಲೀಸರು ದೂಷಿಸಿದ್ದರು.
ಬಿಜೆಪಿ ಸದಸ್ಯರ ಹತ್ಯೆಯ ನಂತರ, ಅನೇಕ ರಾಜಕೀಯ ಮುಖಂಡರು ಮತ್ತು ಕಾರ್ಯಕರ್ತರು ವಿಶೇಷವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ವಾಸಿಸುವವರಿಗೆ ಭದ್ರತೆ ನೀಡುವಂತೆ ಒತ್ತಾಯಿಸಿದ್ದಾರೆ. ಸಧ್ಯ ಅಪಹರಣಕ್ಕೆ ಸಂಬಂಧಿಸಿದ ಸಂಗತಿಗಳು ಮತ್ತು ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


