ಕುಶಾಗ್ರಮತಿ ನಾಯಕ ಸಚಿನ್ ಪೈಲಟ್ ಅವರಿಗೆ ಹೀಗಾಗಬಾರದಿತ್ತು: ಶಶಿ ತರೂರ್
ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ವಜಾಗೊಂಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬೇಸರ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್ ಪೈಲಟ್ ವಜಾಗೊಂಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿನ್ ಪೈಲಟ್ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ. ‘ಸಚಿನ್ ಪೈಲಟ್ ಅವರು ಕಾಂಗ್ರೆಸ್‌ನಿಂದ ನಿರ್ಗಮಿಸುತ್ತಿರುವುದು ಬೇಸರ ಉಂಟುಮಾಡಿದೆ. ಹೀಗಾಗಬಾರದಿತ್ತು. ಅವರೊಬ್ಬ ಅತ್ಯುತ್ತಮ ಮತ್ತು ಕುಶಾಗ್ರಮತಿ ನಾಯಕ. ಈ ನಿರ್ಧಾರ ಕೈಗೊಳ್ಳುವ ಬದಲು ಅವರು, ಅವರದೇ ಆದ ಮತ್ತು ನಮ್ಮೆಲ್ಲರ ಕನಸಾದ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಮತ್ತು ಪರಿಣಾಮಕಾರಿಯನ್ನಾಗಿಸುವ ಕಾರ್ಯಕ್ಕೆ ಕೈಜೋಡಿಸಬೇಕಾಗಿತ್ತು’ ಎಂದು ತರೂರ್ ಟ್ವೀಟ್ ಮಾಡಿದ್ದಾರೆ
ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್‌ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಹೀಗಾಗಿ ಅವರನ್ನು ಮಂಗಳವಾರ ವಜಾಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


