ಬಿಜೆಪಿ ಆತಿಥ್ಯ ತಿರಸ್ಕರಿಸಿ, ಮರಳಿ ಕಾಂಗ್ರೆಸ್ ಕುಟುಂಬ ಸೇರಿ: ಸಚಿನ್ ಪೈಲಟ್ ಗೆ ಸುರ್ಜೇವಾಲಾ
ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.

ಜೈಪುರ್: ಬಂಡಾಯ ನಾಯಕ ಸಚಿನ್ ಪೈಲಟ್ ಅವರು ಬಿಜೆಪಿ ಸೇರುತ್ತಿಲ್ಲ ಎನ್ನುವುದಾದರೆ ಕೇಸರಿ ಪಕ್ಷದ ಆತಿಥ್ಯ ಸ್ವೀಕರಿಸುವುದನ್ನು ಬಿಟ್ಟು ಮರಳಿ ಪಕ್ಷಕ್ಕೆ ಬರಲಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೇವಾಲಾ ಅವರು ಬುಧವಾರ ಹೇಳಿದ್ದಾರೆ.
ಸಚಿನ್ ಪೈಲಟ್ ಅವರು ತಾನು ಬಿಜೆಪಿ ಸೇರುತ್ತಿಲ್ಲ ಎಂದು ಹೇಳಿಕೆ ನೀಡಿರುವುದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ನೀವು ಬಿಜೆಪಿ ಹೋಗಲು ಬಯಸುವುದಿಲ್ಲ ಎನ್ನುವುದಾದರೆ. ಆ ಪಕ್ಷದ ಆತಿಥ್ಯ ತಿರಸ್ಕರಿಸಿ ಮರಳಿ ಕಾಂಗ್ರೆಸ್ ಕುಟುಂಬಕ್ಕೆ ಬನ್ನಿ ಎಂದು ಸುರ್ಜೇವಾಲಾ ಅವರು ಮನವಿ ಮಾಡಿದ್ದಾರೆ.
ಪೈಲಟ್ ಅವರು ಮೊದಲು ಐಷಾರಾಮಿ ಹೋಟೆಲ್ ನಲ್ಲಿ ಹರಿಯಾಣ ಪೊಲೀಸರ ಭದ್ರತೆಯಲ್ಲಿರುವ ಕಾಂಗ್ರೆಸ್ ಶಾಸಕರನ್ನು ಬಿಟ್ಟು ಕಳುಹಿಸಲಿ ಎಂದು ಸುರ್ಜೇವಾಲಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ನಮ್ಮ ಪಕ್ಷದ ನಾಯಕರು ಸಚಿನ್ ಪೈಲಟ್ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಆದರೂ ಅವರು ಮತ್ತು ಅವರ ಬೆಂಬಲಿತ ಕೆಲವು ಶಾಸಕರು ಶಾಸಕಾಂಗ ಪಕ್ಷದ ಸಭೆಗೆ ಗೈರು ಆದರು ಎಂದು ಸುರ್ಜೇವಾಲಾ ಅವರು ಹೇಳಿದ್ದಾರೆ.
ಸದ್ಯ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿತ ಕಾಂಗ್ರೆಸ್ ಶಾಸಕರು ಬಿಜೆಪಿ ಆಡಳಿತವಿರುವ ಹರಿಯಾಣದ ಗುರುಗ್ರಾಮದ ಐಷಾರಾಮಿ ಹೋಟೆಲ್ ವೊಂದರಲ್ಲಿ ತಂಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


