ದೇಶ

ಮುಂಬೈನಲ್ಲಿ ಭಾರಿ ಮಳೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ

ಕೊರೋನಾ ಅಟ್ಟಹಾಸಕ್ಕೆ ಸಿಕ್ಕು ನಲುಗಿರುವ ದೇಶದ ವಾಣಿಜ್ಯ ರಾಜಧಾನಿ, ಮುಂಬೈನಲ್ಲಿ ಮಳೆ ಆಘಾತ ನೀಡುತ್ತಿದೆ. ಮುಂದಿನ ಆರು ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂಬೈನಲ್ಲಿ ಭಾರಿ ಮಳೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ
ಸಾಂದರ್ಭಿಕ ಚಿತ್ರ
Published On :

ಮುಂಬೈ: ಕೊರೋನಾ ಅಟ್ಟಹಾಸಕ್ಕೆ ಸಿಕ್ಕು ನಲುಗಿರುವ ದೇಶದ ವಾಣಿಜ್ಯ ರಾಜಧಾನಿ, ಮುಂಬೈನಲ್ಲಿ ಮಳೆ ಆಘಾತ ನೀಡುತ್ತಿದೆ. ಮುಂದಿನ ಆರು ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮುಂಬೈ, ಥಾಣೆ ಮತ್ತು ಪಾಲ್ಗರ್ ಪ್ರದೇಶದಲ್ಲಿ ಈ ವಾರಪೂರ್ತಿ ಮಳೆಯಾಗಲಿದ್ದು, ಗುರುವಾರ ಕೂಡಾ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೂರು ಪ್ರದೇಶಗಳಲ್ಲಿ ಯಲ್ಲೋ ಅಲರ್ಟ್ ಬದಲಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂಬೈನ ಬಂದ್ರಾ, ಬಂದ್ರಾ ಕುರ್ಲಾ ಕಾಂಪ್ಲೆಕ್ಸ್(ಪೂರ್ವ), ಸಂತಾಕ್ರಜ್, ಕೊಲಬಾ, ಮಹಾಲಕ್ಷ್ಮೀ, ರಾಮಮಂದಿರ ಮತ್ತು ಎನ್ಎಸ್ ಸಿ ಸ್ಟೇಷನ್ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇದುವರೆಗೂ 10 ಸೆಂಟಿ ಮೀಟರ್ ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಬೈನ ಸಾಕಷ್ಟು ಕಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡು, ವಾಹನ ಸಂಚಾರ ಅಸ್ತವ್ಯಸ್ತವಾಗಿವೆ. ಮುಂಬೈ ಮಹಾನಗರ ಪಾಲಿಕೆಯು ಸಾರ್ವಜನಿಕರಲ್ಲಿ ಮನವಿ ಮಾಡಿದ್ದು, ರಸ್ತೆಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.