ಲಡಾಖ್ ಸಂಘರ್ಷ: ಚೀನಾ ಹಿಂದೆ ಸರಿಯುವ ಕುರಿತು 'ನಿರಂತರ ಪರಿಶೀಲನೆ'ಯ ಅಗತ್ಯವಿದೆ - ಭಾರತೀಯ ಸೇನೆ
ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ(ಎಲ್ ಎಸಿ) ರೇಖೆಯಿಂದ ಸೇನೆಯನ್ನು ಸಂಪೂರ್ಣ ಹಿಂದಕ್ಕೆ ಪಡೆದುಕೊಳ್ಳುವುದಕ್ಕೆ ಭಾರತ ಮತ್ತು ಚೀನಾ ಸೇನೆ ಒಪ್ಪಿಕೊಂಡಿವೆ.

ನವದೆಹಲಿ: ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ(ಎಲ್ ಎಸಿ) ರೇಖೆಯಿಂದ ಸೇನೆಯನ್ನು ಸಂಪೂರ್ಣ ಹಿಂದಕ್ಕೆ ಪಡೆದುಕೊಳ್ಳುವುದಕ್ಕೆ ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಆದರೆ ಪಿಎಲ್‌ಎಯಿಂದ ಚೀನಾ ಹಿಂದಕ್ಕೆ ಸರಿಯುವ ಕುರಿತು "ನಿರಂತರ ಪರಿಶೀಲನೆಯ ಅಗತ್ಯವಿದೆ ಎಂದು ಭಾರತೀಯ ಸೇನೆ ಒತ್ತಿ ಹೇಳಿದೆ.
ಸಂಘರ್ಷದಿಂದ ಸಂಪೂರ್ಣ ಹಿಂದೆ ಸರಿಯುವ ಉದ್ದೇಶಕ್ಕೆ ಎರಡೂ ಕಡೆಯವರು ಬದ್ಧರಾಗಿರುತ್ತಾರೆ. ಆದರೆ ಸೇನೆ ಹಿಂಪಡೆಯುವ ಪ್ರಕ್ರಿಯೆಯು ಸಂಕೀರ್ಣವಾಗಿದ್ದು, ನಿರಂತರ ಪರಿಶೀಲನೆಯ ಅಗತ್ಯವಿದೆ ಎಂದು ಭಾರತೀಯ ಸೇನೆ ಹೇಳಿದೆ.
ಎಲ್ಎಸಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದ ಸುಧಾರಣೆಗಾಗಿ ನಡೆದ ಕಮಾಂಡರ್ ಮಟ್ಟದ ನಾಲ್ಕನೇ ಮಾತುಕತೆಯಲ್ಲಿ, ಈಗಿನ ಸ್ಥಳದಿಂದ ಪೂರ್ವನಿರ್ಧರಿತ ದೂರಕ್ಕೆ ಸೈನ್ಯವನ್ನು ಹಿಂತಿರುಗಿಸಲು ಎರಡೂ ಕಡೆಯವರು ನಿರ್ಧರಿಸಿದ್ದಾರೆ.
ಎರಡು ಸ್ಥಳಗಳಿಂದ(ಪೆಟ್ರೋಲಿಂಗ್ ಪಾಯಿಂಟ್ಸ್ 14 ಮತ್ತು 15) ಸೇನೆಯನ್ನು ಸಂಪೂರ್ಣ ಹಿಂಪಡೆಯಲು ಉಭಯ ಸೇನೆಗಳು ಒಪ್ಪಿಕೊಂಡಿವೆ. ಹಾಟ್ ಸ್ಪ್ರಿಂಗ್ಸ್ ಮತ್ತು ಪ್ಯಾಂಗಾಂಗ್ ತ್ಸೋನಿಂದ ಭಾಗಶಃ ಸೇನೆಯನ್ನು ಹಿಂಪಡೆಯುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪ್ರದೇಶಗಳಿಂದಲೂ ಸೇನೆ ಹಿಂಪಡೆಯುವ ನಿರೀಕ್ಷೆಯಿದೆ ಎಂದು ಭಾರತೀಯ ಸೇನಾ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉಭಯ ಸೇನೆಗಳ ಹಿರಿಯ ಕಮಾಂಡರ್ ಗಳ ನಡುವಿನ ಸಂಕೀರ್ಣ ಮಾತುಕತೆ ಸುಮಾರು 15 ಗಂಟೆಗಳ ಕಾಲ ನಡೆದಿದ್ದು, ಭಾರತೀಯ ನಿಯೋಗ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿಗೆ ರೆಡ್ ಲೈನ್ಸ್ ಬಗ್ಗೆ ಮಾಹಿತಿ ನೀಡಿದ್ದು, ಈ ನಿರ್ದಿಷ್ಟ ಪ್ರದೇಶದಲ್ಲಿ ಸಂಪೂರ್ಣ ಪರಿಸ್ಥಿತಿಯ ಸುಧಾರಣೆಯ ಜವಾಬ್ದಾರಿ ಚೀನಾದ ಮೇಲಿದೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


