ದೇಶ

ಮಹಾರಾಷ್ಟ್ರ ಪೊಲೀಸ್ ನೆರವಿಗೆ ನಿಂತ ಸೋನು ಸೂದ್; 25 ಸಾವಿರ ಫೇಸ್ ಶೀಲ್ಡ್ ಪೂರೈಕೆ

ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರ ಪೊಲೀಸರಿಗೆ ನೆರವಿಗೆ ನಿಂತಿದ್ದಾರೆ.

ಮಹಾರಾಷ್ಟ್ರ ಪೊಲೀಸ್ ನೆರವಿಗೆ ನಿಂತ ಸೋನು ಸೂದ್; 25 ಸಾವಿರ ಫೇಸ್ ಶೀಲ್ಡ್ ಪೂರೈಕೆ
ಸೋನು ಸೂದ್
Published On :

ಮುಂಬೈ: ಕೊರೋನಾ ವೈರಸ್ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರ ನೆರವಿಗೆ ನಿಂತಿದ್ದ ಬಾಲಿವುಡ್ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರ ಪೊಲೀಸರಿಗೆ ನೆರವಿಗೆ ನಿಂತಿದ್ದಾರೆ.

ಹೌದು.. ಈ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರರಿಗೆ ಆಹಾರ ಮತ್ತು ತವರಿಗೆ ಮರಳಲು ನೆರವು ನೀಡಿದ್ದ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ಕೋವಿಡ್19 ರಕ್ಷಣಾ ಪರಿಕರಗಳನ್ನು ನೀಡುವ ಮೂಲಕ ನೆರವಿಗೆ ನಿಂತಿದ್ದಾರೆ. ಮಹಾರಾಷ್ಟ್ರ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ಖರೀದಿಸಿ ನೀಡಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಟ್ವೀಟ್ ಮಾಡಿದ್ದು, ನಮ್ಮ ಪೊಲೀಸ್ ಸಿಬ್ಬಂದಿಗೆ 25 ಸಾವಿರ ಫೇಸ್ ಶೀಲ್ಡ್ ನೀಡುವ ಮೂಲಕ ಕರ್ತವ್ಯ ಮೆರೆದಿದ್ದಾರೆ. ಅವರಿಗೆ ನಮ್ಮ ಧನ್ಯವಾದ ಎಂದು ಹೇಳಿದ್ದಾರೆ.

ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರದಲ್ಲಿ ಈ ವರೆಗೂ 6,400 ಮಂದಿ ಪೊಲೀಸ್ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದು, ಈ ಪೈಕಿ 5,100 ಮಂದಿ ಪೊಲೀಸರು ಗುಣಮುಖರಾಗಿದ್ದಾರೆ. 1,213 ಮಂದಿ ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 48 ಮಂದಿ ಪೊಲೀಸರು ಕೊರೋನಾಗೆ ಬಲಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.