ದೇಶ

ಕ್ವಾರಂಟೈನ್ ಕೇಂದ್ರದಲ್ಲಿ ಕಾಮುಕರ ಕ್ರೌರ್ಯ: ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರ

ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರು ಕ್ರೌರ್ಯಮುಂದುವರೆಸಿದ್ದು, ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಕ್ವಾರಂಟೈನ್ ಕೇಂದ್ರದಲ್ಲಿ ಕಾಮುಕರ ಕ್ರೌರ್ಯ: ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರ
ಸಂಗ್ರಹ ಚಿತ್ರ
Published On :

ಮುಂಬೈ: ಕ್ವಾರಂಟೈನ್ ಕೇಂದ್ರದಲ್ಲೂ ಕಾಮುಕರು ಕ್ರೌರ್ಯಮುಂದುವರೆಸಿದ್ದು, ಕೊರೋನಾ ಸೋಂಕಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ನವೀ ಮುಂಬೈನ ಪನ್ವೆಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘೋರ ಘಟನೆ ನಡೆದಿದ್ದು, ಕ್ವಾರಂಟೈನ್ ಕೇಂದ್ರದಲ್ಲಿದ್ದ ಕೊರೋನಾ ಸೋಂಕಿತೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಈ ಬಗ್ಗೆ ಸಂತ್ರಸ್ಥೆ ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪನ್ವೆಲ್ ಪೊಲೀಸ್ ಠಾಣಾ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಈ ಬಗ್ಗೆ ಪೊಲೀಸ್ ಅಧಿಕಾರಿ ಅಶೋಕ್ ರಜಪೂತ್ ಅವರು, 40 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢವಾಗಿದ್ದ ಹಿನ್ನಲೆಯಲ್ಲಿ ಪನ್ವೆಲ್ ನಲ್ಲಿರುವ ಇಂಡಿಯಾ ಬುಲ್ಸ್ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಈ ವೇಳೆ ಅದೇ ಕೇಂದ್ರದಲ್ಲಿ ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾತನನ್ನೂ ಇರಿಸಲಾಗಿತ್ತು. ಇಂದು ಮುಂಜಾನೆ ಆತ ಮಹಿಳೆ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಪ್ರಸ್ತುತ ಆರೋಪಿಯನ್ನು ಬಂಧಿಸಿಲ್ಲ. ಕಾರಣ ಆತನ ಕೊರೋನಾ ಟೆಸ್ಟ್ ವರದಿ ಬಂದಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಆತನನ್ನು ಪ್ರತ್ಯೇಕವಾಗಿರಿಸಿ ವರದಿಗಾಗಿ ಕಾಯುತ್ತಿದ್ದೇವೆ. ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.