ರಾಜಸ್ಥಾನ: ಹೈಕೋರ್ಟ್ ವಿಭಾಗೀಯ ಪೀಠದಿಂದ ಪೈಲಟ್ ಬಣದ ಅರ್ಜಿ ವಿಚಾರಣೆ, ಸಂಜೆ ಸ್ಪೀಕರ್ ರಿಂದ ಶಾಸಕರ ವಿಚಾರಣೆ
ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೊಸದಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠಣದಲ್ಲಿ ನಡೆಯುತ್ತಿದೆ.

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹಾಗೂ ಇತರೆ 18 ಬಂಡಾಯ ಶಾಸಕರಿಗೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ಪ್ರಶ್ನಿಸಿ ಹೊಸದಾಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠಣದಲ್ಲಿ ನಡೆಯುತ್ತಿದೆ.
ಸಚಿನ್ ಪೈಲಟ್ ಹಾಗೂ ಇತರ 18 ಶಾಸಕರನ್ನು ಅನರ್ಹಗೊಳಿಸಲು ಸ್ಪೀಕರ್ ಸಿ. ಪಿ. ಜೋಷಿ ಅವರು ನೋಟಿಸ್ ನೀಡಿದ್ದು, ಇದನ್ನು ಪ್ರಶ್ನಿಸಿ ಪೈಲಟ್ ಬಣ ಹೈಕೋರ್ಟ್ ಮೆಟ್ಟಿಲೇರಿದೆ.
ಮುಖ್ಯ ನ್ಯಾಯಮೂರ್ತಿ ಇಂದ್ರಜೀತ್ ಮಹಂತಿ ಹಾಗೂ ನ್ಯಾಯಮೂರ್ತಿ ಪ್ರಕಾಶ್ ಗುಪ್ತಾ ಅವರನ್ನೊಳಗೊಂಡ ವಿಭಾಗೀಯ ಪೀಠ ಬಂಡಾಯ ಶಾಸಕರ ಅರ್ಜಿ ವಿಚಾರಣೆ ನಡೆಸುತ್ತಿದ್ದು, ವಿಧಾನಸಭೆ ಅಧಿವೇಶನ ನಡೆದ ಸಂದರ್ಭದಲ್ಲಿ ಮಾತ್ರ ವಿಪ್ ಅನ್ವಯವಾಗುತ್ತದೆ. ಹೀಗಾಗಿ ಸ್ಪೀಕರ್ ನೀಡಿರುವ ಈ ನೋಟಿಸ್‌ಗೆ ಯಾವುದೇ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು ಪೈಲಟ್ ಬಣದ ಪರ ವಕೀಲ ಹರೀಶ್ ಸಾಳ್ವೆ ಅವರು ವಾದಿಸಿದರು.
ಸಚಿನ್ ಪೈಲಟ್ ಪರ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ವಾದ ಮಂಡಿಸುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಪರ ಮತೋರ್ವ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅಘಾಡಕ್ಕೆ ಇಳಿದಿದ್ದಾರೆ.
ಈ ಮಧ್ಯೆ, ರಾಜಸ್ಥಾನ ವಿಧಾನಸಭೆ ಸ್ಪೀಕರ್ ಸಿಪಿ ಜೋಷಿ ಅವರು ಇಂದು ಸಂಜೆಯೊಳಗೆ ನೋಟಿಸ್ ಗೆ ಉತ್ತರಿಸುವಂತೆ ಬಂಡಾಯ ಶಾಸಕರಿಗೆ ಸೂಚನೆ ನೀಡಿದ್ದು, ಸಂಜೆ ಐದು ಗಂಟೆಗೆ ಶಾಸಕರ ನೋಟಿಸ್ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


