ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ವಸುಂಧರಾ ರಾಜೆ ಗಂಭೀರ ಆರೋಪ
ರಾಜಸ್ಥಾನದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗೆಗೆ ಮೌನ ಮುರಿದಿದ್ದಾರೆ.

ಜೈಪುರ್: ರಾಜಸ್ಥಾನದ ಮಾಜಿ ಸಿಎಂ ಮತ್ತು ಬಿಜೆಪಿ ನಾಯಕಿ ವಸುಂಧರಾ ರಾಜೆ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗೆಗೆ ಮೌನ ಮುರಿದಿದ್ದಾರೆ.
ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯಕ್ಕೆ ರಾಜಸ್ಥಾನದ ಜನರು ಬೆಲೆ ತೆರುತ್ತಿರುವುದು ದುರದೃಷ್ಟಕರ ಎಂದು ಶನಿವಾರ ಟ್ವೀಟ್ ಮೂಲಕ ರಾಜೇ ಹೇಳಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕ, ಮಹಿಳೆಯರ ಮೇಲಿನ ಅಪರಾಧ, ಮಿಡತೆ ದಾಳಿಗಳು, ವಿದ್ಯುತ್ ಸರಬರಾಜಿನಲ್ಲಿನ ಸಮಸ್ಯೆ ಎಲ್ಲದರ ಬಗ್ಗೆ ಅವರು ಪ್ರಸ್ತಾಪಿಸಿದರು.
"ಬಿಜೆಪಿ ಮತ್ತು ಬಿಜೆಪಿ ನಾಯಕರ ಹೆಸರನ್ನು ಸುಖಾಸುಮ್ಮನೆ ಎಳೆದು ತರಲು ಪ್ರಯತ್ನಿಸುವುದರಲ್ಲಿ ಅರ್ಥವಿಲ್ಲ! ನಮ್ಮ ಜನರ ಹಿತಾಸಕ್ತಿ ಅತ್ಯಂತ ಮುಖ್ಯವಾಗಿರಬೇಕು" ಎಂದು ವಸುಂಧರಾ ರಾಜೆ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


