ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 34,884 ಕೇಸ್, 26,273 ಮಂದಿ ಸಾವು; ಒಟ್ಟು ಸೋಂಕಿತರ ಸಂಖ್ಯೆ 1.38 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 34,884 ಕೇಸ್, 26,273 ಮಂದಿ ಸಾವು; ಒಟ್ಟು ಸೋಂಕಿತರ ಸಂಖ್ಯೆ 1.38 ಲಕ್ಷಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 34,884 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 10,38,716ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಈ ನಡುವೆ ನಿನ್ನೆ ಒಂದೇ ದಿನ ಮಹಾಮಾರಿ ವೈರಸ್ 671 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ ಕೂಡ 26,273ಕ್ಕೆ ತಲುಪಿದೆ. 

ಇನ್ನು 10,38,716 ಮಂದಿ ಸೋಂಕಿತರ ಪೈಕಿ 6,53,751 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇನ್ನೂ ದೇಶದಲ್ಲಿ 3,58,692 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ದೇಶದಲ್ಲೇ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದಲ್ಲಿ ಶುಕ್ರವಾರ ಮತ್ತೆ 8308 ಮಂದಿಗೆ ಹೊಸದಾಗಿ ಕೊರೋನಾ ವ್ಯಾಪಿಸಿದೆ. ಈ ಮೂಲಕ ರಾಜ್ಯದಲ್ಲಿ ಸತತ ಮೂರು ದಿನಗಳಿಂದಲೂ 8 ಸಾವಿರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2,92,589ರ ಮೂಲಕ 3 ಲಕ್ಷದ ಹತ್ತಿರಕ್ಕೆ ಸಾಗುತ್ತಿದೆ. ಇನ್ನು ಗುರುವಾರ ಕೊರೋನಾಕ್ಕೆ 258 ಮಂದಿ ಮೃತರಾಗಿದ್ದು, ಈ ವೈರಸ್'ಗೆ ಬಲಿಯಾದವರ ಸಂಖ್ಯೆ 11,452ಕ್ಕೆ ಜಿಗಿದಿದೆ. 

ಇನ್ನು ತಮಿಳುನಾಡಿನಲ್ಲಿ 4538, ಕರ್ನಾಟಕದಲ್ಲಿ 3693, ಆಂಧ್ರಪ್ರದೇಶ 2602, ಪಶ್ಚಿಮ ಬಂಗಾಳ 1894, ಬಿಹಾರದಲ್ಲಿ 1742ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ 115, ತಮಿಳುನಾಡಿನಲ್ಲಿ 79, ಆಂಧ್ರಪ್ರದೇಶ 42, ಪಶ್ಚಿಮ ಬಂಗಾಳದಲ್ಲಿ 26 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.