ದೇಶ

24 ಗಂಟೆಗಳಲ್ಲಿ ದೇಶಾದ್ಯಂತ 3,58,127 ಕೋವಿಡ್ ಪರೀಕ್ಷೆ, ಜು.18ರವರೆಗೆ ಒಟ್ಟಾರೆ 1,37,91,869 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,58,127 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ ದೇಶಾದ್ಯಂತ 3,58,127 ಕೋವಿಡ್ ಪರೀಕ್ಷೆ, ಜು.18ರವರೆಗೆ ಒಟ್ಟಾರೆ 1,37,91,869 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಸಂಗ್ರಹ ಚಿತ್ರ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,58,127 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,58,127 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.18ರವರೆಗೂ 1,37,91,869 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 38,902 ಮಂದಿಯಲ್ಲಿ ವೈರಸ್ ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ 543 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 26,816ಕ್ಕೆ ಏರಿಕೆಯಾಗಿದೆ. 

ಇದೇ ವೇಳೆ 10,77,618 ಮಂದಿ ಸೋಂಕಿತರ ಪೈಕಿ 6,77,423 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, 3,73,379 ಮಂದಿ ಇನ್ನೂ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.