ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಬಹುದು ಎಂದು ಹೇಳಿದ ಬೆನ್ನಲ್ಲೇ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಶರದ್ ಪವಾರ್ ಭಾನುವಾರ ಲೇವಡಿ ಮಾಡಿದ್ದರು.
ಶರದ್ ಪವಾರ್ ಹೇಳಿಕೆ ಭಗವಾನ್ ರಾಮನಿಗೆ ಮಾಡಿರುವ ದ್ರೋಹದ ಹೇಳಿಕೆಯಾಗಿದೆ. ಅದು ಮೋದಿಯ ವಿರುದ್ಧ ಅಲ್ಲ, ರಾಮನ ವಿರುದ್ಧ ರಾಮ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಬಂದರೆ ಹೇಗೆ ಆರ್ಥಿಕತೆ ಹಾಳಾಗಲಿದೆ ಎಂದು ಉಮಾ ಭಾರತಿ ಕಿಡಿಕಾರಿದ್ದಾರೆ.
ಪ್ರಧಾನಿ ಮೋದಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ. ಈವರೆಗೂ ಅವರು ರಜೆ ತೆಗೆದುಕೊಂಡಿಲ್ಲ. ಅವರ ವರ್ತನೆ ಗೊತ್ತು.
ವಿಮಾನದಲ್ಲಿ ಹೋಗುವಾಗ, ಬರುವಾಗಲೇ ಫೈಲ್‌ಗಳನ್ನು ತೆರವುಗೊಳಿಸುತ್ತಾರೆ. ರಾಮನಿಗಾಗಿ ಅವರು ಎರಡು ಗಂಟೆಗಳನ್ನು ನೀಡಲಿದ್ದಾರೆ ಎಂದು ಉಮಾ ಭಾರತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


