ರಾಮ ಮಂದಿರ ಭೂಮಿ ಪೂಜೆಗೂ ಮುನ್ನ ಅಡ್ವಾಣಿ ವಿರುದ್ಧದ ಬಾಬ್ರಿ ಮಸೀದಿ ಪ್ರಕರಣ ಇತ್ಯರ್ಥಗೊಳಿಸಿ: ಸ್ವಾಮಿ
ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

ನವದೆಹಲಿ: ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮಕ್ಕೂ ಮುನ್ನ ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರ ವಿರುದ್ಧ ಇರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಕೈಬಿಡಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಒಂದು ವೇಳೆ ಅಡ್ವಾಣಿ, ಜೋಷಿ ಅವರು ಅಯೋಧ್ಯೆಯಲ್ಲಿನ ಕಟ್ಟಡವನ್ನು ಧ್ವಂಸಗೊಳಿಸಿದ್ದರೂ ಅವರು ಮಸೀದಿಯನ್ನು ಧ್ವಂಸಗೊಳಿಸಿಲ್ಲ, ಬದಲಾಗಿ ದೇವಾಲಯವನ್ನು ಪುನರ್ ನಿರ್ಮಾಣಕ್ಕಾಗಿ ಉರುಳಿಸಿದ್ದಾರೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ಪ್ರಧಾನಿ ಅಯೋಧ್ಯೆಗೆ ಮಂದಿರ ಭೂಮಿ ಪೂಜೆಗೆ ತೆರಳುವುದಕ್ಕೂ ಮುನ್ನ ಅಡ್ವಾಣಿ, ಜೋಷಿ ಅವರ ವಿರುದ್ಧದ ಬಾಬ್ರಿ ಮಸೀದಿ ಧ್ವಂಸ ಎಂಬ ಕ್ಷುಲ್ಲಕ ಪ್ರಕರಣವನ್ನು ಕೈಬಿಡಬೇಕು ಎಂದು ಸ್ವಾಮಿ ಆಗ್ರಹಿಸಿದ್ದಾರೆ. ಆ.05 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿಂದಂತೆ 250 ಗಣ್ಯರು ಭಾಗಿಯಾಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


