ರಾಜಸ್ಥಾನ ಬಿಕ್ಕಟ್ಟು: ಬಂಡಾಯ ಶಾಸಕರೊಂದಿಗೆ ಮಾತುಕತೆಗೆ ಕಾಂಗ್ರೆಸ್ ಸಿದ್ಧ- ಅವಿನಾಶ್ ಪಾಂಡೆ
ಸಚಿನ್ ಪೈಲಟ್ ಬಣದ ಶಾಸಕರ ಅನರ್ಹತೆ ಕುರಿತಂತೆ ಹೈಕೋರ್ಟ್ ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಒಂದುವೇಳೆ ತೀರ್ಪು ಸ್ಪೀಕರ್ ನೋಟಿಸ್ ಪರವಾಗಿ ಬಿದ್ದರೂ ಬಂಡಾಯ ಶಾಸಕರೊಂದಿಗೆ ಮಾತುಕತೆ ನಡೆಸಲು ಕಾಂಗ್ರೆಸ್ ಸಿದ್ಧವಿರುವುದಾಗಿ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.

ಜೈಪುರ: ಸಚಿನ್ ಪೈಲಟ್ ಬಣದ ಶಾಸಕರ ಅನರ್ಹತೆ ಕುರಿತಂತೆ ಹೈಕೋರ್ಟ್ ಇಂದು ತೀರ್ಪು ನೀಡುವ ಸಾಧ್ಯತೆ ಇದೆ. ಒಂದು ವೇಳೆ ತೀರ್ಪು ಸ್ಪೀಕರ್ ನೋಟಿಸ್ ಪರವಾಗಿ ಬಿದ್ದರೂ ಬಂಡಾಯ ಶಾಸಕರೊಂದಿಗೆ ಮಾತುಕತೆ ನಡೆಸಲು ಕಾಂಗ್ರೆಸ್ ಸಿದ್ಧವಿರುವುದಾಗಿ ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಹೇಳಿದ್ದಾರೆ.
ಬಂಡಾಯ ಶಾಸಕರು ಸ್ಪೀಕರ್ ಮುಂದೆ ಹಾಜರಾಗಲು ಇಂದಿನವರೆಗೂ ಸಮಯಾವಕಾಶವಿದೆ ಎಂದಿರುವ ಅವಿನಾಶ್ ಪಾಂಡೆ, ಗೆಹ್ಲೋಟ್ ಸರ್ಕಾರವನ್ನು ಪತನಗೊಳಿಸುವ ಬಿಜೆಪಿಯ ಸಂಚು ವಿಫಲವಾಗಲಿದೆ. ಗೆಹ್ಲೋಟ್ ಗೆ ಸಂಪೂರ್ಣ ಬಹುಮತವಿದೆ. ಅವರು ಅಧಿಕಾರವನ್ನು ಪೂರ್ಣಗೊಳಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ರಾಜಸ್ಥಾನ ಕಾಂಗ್ರೆಸ್ ಇಂದು ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಆದರೆ, ಸಭೆಯ ಅಜೆಂಡಾ ಇನ್ನೂ ಗೊತ್ತಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಕಳೆದ ಒಂದು ವಾರದ ಅಂತರದಲ್ಲಿ ನಡೆಯುತ್ತಿರುವ ಮೂರನೇ ಕಾಂಗ್ರೆಸ್ ಶಾಸಕಾಂಗ ಸಭೆ ಇದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


