ದೇಶ

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ನಿಧನ: ಮೋದಿ ಸೇರಿ ಹಲವು ಗಣ್ಯರ ಸಂತಾಪ

ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ನಿಧನ: ಮೋದಿ ಸೇರಿ ಹಲವು ಗಣ್ಯರ ಸಂತಾಪ
ರಾಜ್ಯಪಾಲ ಲಾಲ್ ಜಿ ಟಂಡನ್
Published On :

ಭೂಪಾಲ್:  ಮಧ್ಯಪ್ರದೇಶದ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. 
ಜ್ವರ, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಹಾಗೂ ಉಸಿರಾಟದ ಸಮಸ್ಯೆಯಿಂದಾಗಿ ಜೂನ್ 11 ರಂದು ಅವರನ್ನು ಲಖನೌ
ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಲಾಲ್ ಜಿ ಟಂಡನ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಅಶುತೋಷ್ ಟಂಡನ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ಲಾಲ್ ಜಿ ಟಂಡನ್ ಅವರು ಯಕೃತ್ತಿನ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ನಂತರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಅವರನ್ನು
 ವೆಂಟಿಲೇಟರ್ ನಲ್ಲಿಡಲಾಗಿದೆ ಎಂದು ಮೆದಾಂತ್ ಆಸ್ಪತ್ರೆಯ ನಿರ್ದೇಶಕ ಪ್ರೊ. ರಾಕೇಶ್ ಕಪೂರ್ ಸೋಮವಾರ ಹೇಳಿಕೆ ನೀಡಿದ್ದರು.

ಲಾಲ್ ಜಿ ಟಂಡನ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.