ಮೋದಿ ಸರ್ಕಾರದ 'ಸಾಧನೆ'ಗಳನ್ನು ಪಟ್ಟಿ ಮಾಡಿದ ರಾಹುಲ್
ಕೋವಿಡ್ -19 ಯುಗದಲ್ಲಿ ರಾಜಸ್ಥಾನ ಸರ್ಕಾರ ಪತನಗೊಳಿಸುವ ಪ್ರಯತ್ನ, ನಮಸ್ತೆ ಟ್ರಂಪ್ ಕಾರ್ಯಕ್ರಮಗಳುಕೇಂದ್ರ ಸರ್ಕಾರದ ಸಾಧನೆಗಳಲ್ಲಿ ಒಂದಾಗಿವೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ಕೋವಿಡ್ -19 ಯುಗದಲ್ಲಿ ರಾಜಸ್ಥಾನ ಸರ್ಕಾರ ಪತನಗೊಳಿಸುವ ಪ್ರಯತ್ನ, ನಮಸ್ತೆ ಟ್ರಂಪ್ ಕಾರ್ಯಕ್ರಮಗಳು
ಕೇಂದ್ರ ಸರ್ಕಾರದ ಸಾಧನೆಗಳಲ್ಲಿ ಒಂದಾಗಿವೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮೋದಿ
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸರ್ಕಾರದ ಇಂತಹ "ಸಾಧನೆಗಳಿಂದ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ದೇಶವು ಈಗ 'ಆತ್ಮನಿರ್ಭರ್' ಆಗಿದೆ ಎಂದು ಹಿಂದಿಯಲ್ಲಿ ವ್ಯಂಗ್ಯ ಭರಿತ ಟ್ವೀಟ್ ನ್ನು ರಾಹುಲ್ ಗಾಂಧಿ ಮಾಡಿದ್ದಾರೆ.
ಕೊರೋನಾ ವೈರಸ್ ಬಿಕ್ಕಟ್ಟು ನಿರ್ವಹಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷ, ಸಾಂಕ್ರಾಮಿಕ ರೋಗವನ್ನು ಸರ್ಕಾರದ ಯೋಜನೆಯನ್ನು ಅವರು ಪ್ರಶ್ನಿಸಿದ್ದಾರೆ.
ಫೆಬ್ರವರಿಯಲ್ಲಿ- ನಮಸ್ತೆ ಟ್ರಂಪ್, ಮಾರ್ಚ್ - ಮಧ್ಯ ಪ್ರದೇಶ ಸರ್ಕಾರದ ಪತನ, ಏಪ್ರಿಲ್ - ಜನರಿಂದ ಮೊಂಬತ್ತಿ ಹಚ್ಚಿಸಿದದ್ದು, ಮೇ - ಸರ್ಕಾರದ ಆರನೇ ವರ್ಷಾಚರಣೆ, ಜೂನ್- ಬಿಹಾರ ವರ್ಚುವಲ್ ರ್‍ಯಾಲಿ; ಜುಲೈ- ರಾಜಸ್ಥಾನದ ಸರ್ಕಾರ ಪತನದ ಪ್ರಯತ್ನ ಕೋವಿಡ್ ಯುಗದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳಾಗಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದೇ ಕಾರಣದಿಂದಾಗಿ ದೇಶ ಈಗ ಕೊರೋನಾ ವಿರುದ್ಧದ ಹೋರಾಟದಲ್ಲಿ ಆತ್ಮ ನಿರ್ಭರ್ ( ಸ್ವಾವಲಂಬಿ) ಆಗಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


