ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಆತ್ಮಹತ್ಯೆಗೆ ಯತ್ನ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಆರೋಪಿ ನಳಿನಿ ಶ್ರೀಹರನ್ ವೆಲ್ಲೂರ್ ಕಾರಾಗೃಹದಲ್ಲಿ
ನಿನ್ನೆ ರಾತ್ರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 30 ವರ್ಷಗಳ ಜೈಲುವಾಸದ ಸಂದರ್ಭದಲ್ಲಿ ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ . ಇದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವೆಲ್ಲೂರ್ ಜೈಲು ಆಕೆಗೆ ಸುರಕ್ಷಿತವಾಗಿಲ್ಲ, ಆಕೆಯನ್ನು ಪುಝಲ್ ಕಾರಾಗೃಹಕ್ಕೆ ರವಾನಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡುವುದಾಗಿ ನಳಿನಿ ಪರ ವಕೀಲರು ಹೇಳಿದ್ದಾರೆ.
ನಳಿನಿ ಪತಿ ಮುರುಗನ್ ಸಹ ಇದೇ ಕಾರಾಗೃಹದಲ್ಲಿದ್ದು, ತನ್ನ ಪತ್ನಿಯನ್ನು ಬೇರೆ ಜೈಲಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.ಶೀಘ್ರದಲ್ಲಿಯೇ ಕಾನೂನು ರೀತಿಯ ಇಬ್ಬರ ಮನವಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಮತ್ತು ಮುರುಗನ್ ಸೇರಿ ಏಳು ಜನರಿಗೆ ವಿಶೇಷ ಟಾಡಾ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


