ಖಾಸಗಿ ವಲಯದೊಂದಿಗೆ ಟೆಕ್ ಆಧಾರಿತ ಪರಿಹಾರಗಳ ಅಭಿವೃದ್ಧಿಗೆ ಕೇಂದ್ರದಿಂದ 7 ಕ್ಷೇತ್ರಗಳ ಆಯ್ಕೆ!
ಮಾಹಾಮಾರಿ ಕೊರೋನಾ ನಂತರದ ಸವಾಲುಗಳನ್ನು ಎದುರಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಕ್ರಮದಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಏಳು ಪ್ರಮುಖ ಕ್ಷೇತ್ರಗಳನ್ನು ಗುರುತಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಮಾಹಾಮಾರಿ ಕೊರೋನಾ ನಂತರದ ಸವಾಲುಗಳನ್ನು ಎದುರಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಕ್ರಮದಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಏಳು ಪ್ರಮುಖ ಕ್ಷೇತ್ರಗಳನ್ನು ಗುರುತಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀತಿ ಆಯೋಗ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಂತ್ರಜ್ಞಾನ ನಾಯಕರ ಸಂವಾದದಲ್ಲಿ ತಂತ್ರಜ್ಞಾನ ಆಧಾರಿತ ಪರಿಹಾರಗಳ ಕುರಿತು ಚರ್ಚಿಸಲಾಯಿತು.
"ಕಳೆದ ಮೂರು ತಿಂಗಳುಗಳಲ್ಲಿ, ಭಾರತದ 75ಕ್ಕೂ ಹೆಚ್ಚು ಪರಿಣಿತರು ನೀತಿ ಆಯೋಗ ಮತ್ತು ಹಲವಾರು ಸಚಿವಾಲಯಗಳು/ಇಲಾಖೆಗಳೊಂದಿಗೆ ಏಳು ಪ್ರಮುಖ ವಿಷಯಗಳಲ್ಲಿ ಕೆಲಸ ಮಾಡುತ್ತಿವೆ ಮತ್ತು ತಾಂತ್ರಿಕ ಪರಿಹಾರಗಳ ಪರಿಕಲ್ಪನೆ ಮತ್ತು ಅಭಿವೃದ್ಧಿಪಡಿಸುತ್ತಿವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸುದ್ದಿ ಸಂಸ್ಧೆಗೆ ತಿಳಿಸಿದ್ದಾರೆ.
ಆರ್ಥಿಕತೆ, ಡಿಜಿಟಲ್ ಆರೋಗ್ಯ, ಜೀವನೋಪಾಯ, ಪೋಷಣೆ, ಎಂಎಸ್‌ಎಂಇ, ಕೃಷಿ ಮತ್ತು ಶಿಕ್ಷಣ ಈ ಏಳು ಕ್ಷೇತ್ರಗಳನ್ನು ಆಯ್ಕೆ ಮಾಡಲಾಗಿದೆ.
ಕೋವಿಡ್ -19ರ ನಂತರದ ಜಗತ್ತಿನಲ್ಲಿ ಹೊರಹೊಮ್ಮುವ ಪ್ರಮುಖ ವಿಷಯಗಳನ್ನು ಗುರುತಿಸಲು ಮತ್ತು ತಂತ್ರಜ್ಞಾನದ ಹಸ್ತಕ್ಷೇಪಕ್ಕಾಗಿ ನಿರ್ದಿಷ್ಟ ಬಳಕೆಯ ಪ್ರಕರಣಗಳನ್ನು ಗುರುತಿಸಲು ಉನ್ನತ ತಂತ್ರಜ್ಞಾನ ನಾಯಕರೊಂದಿಗೆ ಕೆಲಸ ಮಾಡಲು ಮೋದಿ ಸರ್ಕಾರ ಥಿಂಕ್-ಟ್ಯಾಂಕ್ ನೀತಿ ಆಯೋಗಕ್ಕೆ ನಿರ್ದೇಶನ ನೀಡಿದ್ದರು.
ಗುಣಮಟ್ಟದ ಡಿಜಿಟಲ್ ಹೆಲ್ತ್‌ಕೇರ್‌ನ ಅಗತ್ಯವನ್ನು ಪ್ರಧಾನಿ ಒತ್ತಿ ಹೇಳಿದರು. ದೇಶಾದ್ಯಂತ ಗುಣಮಟ್ಟದ ಆರೋಗ್ಯ ಮತ್ತು ಪರಿಹಾರಗಳ ವಿಸ್ತರಣೆಯನ್ನು ಖಚಿತಪಡಿಸಿಕೊಳ್ಳಲು ಮೋದಿ ಈ ತಂಡವನ್ನು ವಿನಂತಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


