ಅಮಿತ್ ಶಾ ಕಾರ್ಯದರ್ಶಿಎಂದು ರಾಜಸ್ಥಾನ, ಹರಿಯಾಣ ಮಂತ್ರಿಗಳ ಕರೆಸಿದ್ದ ವ್ಯಕ್ತಿ ಬಂಧನ
ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಯಕ್ತಿಕ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದ ಹಾಗೂ ಹರಿಯಾಣ ಮತ್ತು ರಾಜಸ್ಥಾನದ ಕಾರ್ಮಿಕ ಇಲಾಖೆ ಮಂತ್ರಿಗಳನ್ನು ಕೆಲಸಕ್ಕೆಂದು ಕರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಅಪರಾಧ ಶಾಖೆ ಪೊಲೀಸರು ಬಂಧಿಸಿದ್ದಾರೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವೈಯಕ್ತಿಕ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದ ಹಾಗೂ ಹರಿಯಾಣ ಮತ್ತು ರಾಜಸ್ಥಾನದ ಕಾರ್ಮಿಕ ಇಲಾಖೆ ಮಂತ್ರಿಗಳನ್ನು ಕೆಲಸಕ್ಕೆಂದು ಕರೆಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಅಪರಾಧ ಶಾಖೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಂದೀಪ್ ಚೌಧರಿ (25) ರಾಜಸ್ಥಾನದ ಅಲ್ವಾರ್ ಜಿಲ್ಲೆಯ ತೆಹ್ ಮುಂದಾವರ್ ನಿವಾಸಿ ಎಂದು ಗುರುತಿಸಲಾಗಿದೆ.
ಗೃಹ ಸಚಿವಾಲಯದ ದೂರಿನ ಆಧಾರದ ಮೇಲೆ ಅಪರಾಧ ವಿಭಾಗವು ಪ್ರಕರಣ ದಾಖಲಿಸಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಶಾ ಅವರ ವೈಯಕ್ತಿಕ ಕಾರ್ಯದರ್ಶಿಯಾಗಿ ನಟಿಸುತ್ತಿರುವ ವ್ಯಕ್ತಿಯೊಬ್ಬ ಹರಿಯಾಣ ಮತ್ತು ರಾಜಸ್ಥಾನದ ಕಾರ್ಮಿಕ ಇಲಾಖೆ ಮಂತ್ರಿ ಗಳಿಗೆ ಕರೆ ಮಾಡಿ ಕರೆಸಿಕೊಂಡಿದ್ದನೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


