ದೇಶ

ಪ್ರಧಾನಿ ಮೋದಿ ತಮ್ಮ ಸ್ವಂತ ವರ್ಚಸ್ಸು ವೃದ್ದಿಗೆ ಸಂಪೂರ್ಣ ಗಮನ ಕೇಂದ್ರಿಕರಿಸಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಾಂಸ್ಥಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಂಡು ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಸ್ವಂತ ವರ್ಚಸ್ಸು ವೃದ್ದಿಗೆ ಸಂಪೂರ್ಣ ಗಮನ ಕೇಂದ್ರಿಕರಿಸಿದ್ದಾರೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಎಲ್ಲಾ ಸಾಂಸ್ಥಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಂಡು ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಟ್ವಿಟರ್ ನಲ್ಲಿ ವಿಡಿಯೋವೊಂದನ್ನು ಹಾಕಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಶೇ. 100 ರಷ್ಟು ತನ್ನ ಸ್ವಂತ ವರ್ಚಸ್ಸು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಿದ್ದಾರೆ. ಈ ಕಾರ್ಯಕ್ಕಾಗಿ ದೇಶದ ಎಲ್ಲಾ ಸಾಂಸ್ಥಿಕ ಸಂಸ್ಥೆಗಳನ್ನು ವಶಕ್ಕೆ ಪಡೆದಿದ್ದಾರೆ. ಒಬ್ಬ ವ್ಯಕ್ತಿಯ ವರ್ಚಸ್ಸು ದೇಶದ ವರ್ಚಸ್ಸನ್ನು ಬದಲಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ನೆರೆಯ ರಾಷ್ಟ್ರದೊಂದಿಗೆ ಗಡಿ ವಿವಾದ, ಮತ್ತಿತರ ಸಮಸ್ಯೆಗಳ ಕಡೆಗೆ ಕೇಂದ್ರಿಕರಿಸಿದ ವಿಡಿಯೋಗಳನ್ನು ಹಾಕಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿಗೆ ಯಾವುದೇ ದೂರದೃಷ್ಟಿಯಲ್ಲ, ಇದೇ ಕಾರಣದಿಂದಾಗಿ ಚೀನಾ ಅಲಲ್ಲಿದೆ ಎಂದು ಹೇಳುವ ಮೂಲಕ ಚೀನಾ ಸೈನಿಕರು ದೇಶದ ಭೂ ಪ್ರದೇಶವನ್ನು ವಶಪಡಿಸಿಕೊಂಡಿದ್ದಾರೆ ಎಂಬುದನ್ನು ಉಲ್ಲೇಖಿಸಿದ್ದಾರೆ.

ಮಾನಸಿಕವಾಗಿ ಚೀನಾದವರೊಂದಿಗೆ ಸದೃಢ ಸ್ಥಾನದಿಂದ ವ್ಯವಹರಿಸಬೇಕಾಗಿದೆ ಎಂದು ಸಲಹೆ ನೀಡಿರುವ ರಾಹುಲ್ ಗಾಂಧಿ, ದೇಶ ಜಾಗತಿಕ ವಿಷನ್ ಹೊಂದಿರಬೇಕಾದ ಅಗತ್ಯವಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.