ಬಂಡಾಯ ಶಾಸಕರಿಂದ ಅನರ್ಹತೆ ಪ್ರಶ್ನಿಸಿ ಅರ್ಜಿ: ರಾಜಸ್ತಾನ ಹೈಕೋರ್ಟ್ ಗೆ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಅನುಮತಿ
ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಸಚಿನ್ ಪೈಲಟ್ ಮತ್ತು ಇತರ 18 ಮಂದಿ ಬಂಡಾಯ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ರಾಜಸ್ತಾನ ಹೈಕೋರ್ಟ್ ಆದೇಶ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ, ಬಿ ಆರ್ ಗವೈ ಮತ್ತು ಕೃಷ್ಣ ಮುರಳಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ಶಾಸಕರ ಅನರ್ಹತೆ ಪ್ರಕರಣದಲ್ಲಿ ರಾಜಸ್ತಾನ ಹೈಕೋರ್ಟ್ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿದೆ.
ನಾಳೆ ಹೈಕೋರ್ಟ್ ನ ತೀರ್ಪು ಹೊರಬರಲಿ, ಅದರ ತೀರ್ಪಿನ ಮೇಲೆ ಸರ್ವೋಚ್ಛ ನ್ಯಾಯಾಲಯದ ತೀರ್ಪು ನಿರ್ಧಾರವಾಗುತ್ತದೆ ಎಂದು ಹೇಳಿದೆ.
ಈ ಮೂಲಕ ಸಚಿನ್ ಪೈಲಟ್ ಅವರಿಗೆ ಸುಪ್ರೀಂ ಕೋರ್ಟ್ ನಿಲುವಿನಿಂದ ಇಂದು ವರವಾಗಿದೆ ಎನ್ನಬಹುದು. ನಾಳೆ ರಾಜಸ್ತಾನ ಹೈಕೋರ್ಟ್ ಏನೇ ತೀರ್ಪು ನೀಡಿದರೂ ಸಹ ಅಂತಿಮ ಫಲಿತಾಂಶ ನಂತರ ಸುಪ್ರೀಂ ಕೋರ್ಟ್ ನೀಡುವ ತೀರ್ಪಿನ ಮೇಲೆ ಅವಲಂಬಿತವಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


