ಜಾರ್ಖಂಡ್: ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ, ಲಾಕ್ ಡೌನ್ ನಿಯಮ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ!
ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ ಜಾರ್ಖಂಡ್ ಸರ್ಕಾರ ಆದೇಶ ಹೊರಡಿಸಿದೆ.

ರಾಂಚಿ: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಾರ್ಖಂಡ್ ಸರ್ಕಾರ ಕಟ್ಟುನಿಟ್ಟಿನ
ಕ್ರಮಕ್ಕೆ ಮುಂದಾಗಿದೆ.
ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ
ಸರ್ಕಾರ ಆದೇಶ ಹೊರಡಿಸಿದೆ.
ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು 12 ಲಕ್ಷ ಗಡಿ ದಾಟಿದ್ದು, ಲಸಿಕೆ ಬರುವವರೆಗೂ ಕೊರೋನಾವೈರಸ್ ವಿರುದ್ಧ
ಧೈರ್ಯದಿಂದ ಹೋರಾಡಬೇಕಾದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 45, 720 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ ಆಗಿದೆ. ಒಂದು ದಿನದಲ್ಲಿ 1, 129 ಸಾವಿನೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ 29, 861ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


