ನಮ್ಮ ಸರ್ಕಾರಕ್ಕೆ ಬಹುಮತ ಇದೆ, ತನಿಖಾ ಸಂಸ್ಥೆಗಳ ದಾಳಿಗೆ ಹೆದರುವುದಿಲ್ಲ: ಅಶೋಕ್ ಗೆಹ್ಲೋಟ್
ಕಾಂಗ್ರೆಸ್ ಕೇಂದ್ರ ತನಿಖಾ ಸಂಸ್ಥೆಗಳ ಇಂತಹ ದಾಳಿಗಳಿಗೆಲ್ಲ ಹೆದರುವುದಿಲ್ಲ, ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುನರುಚ್ಛರಿಸಿದ್ದಾರೆ.

ಜೈಪುರ/ನವದೆಹಲಿ: ಮೊನ್ನೆ ಜೋಧ್ ಪುರದಲ್ಲಿ ತಮ್ಮ ಸೋದರನ ಕಂಪೆನಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದರೂ, ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾದರೂ ಕೂಡ, ಕಾಂಗ್ರೆಸ್ ಕೇಂದ್ರ ತನಿಖಾ ಸಂಸ್ಥೆಗಳ ಇಂತಹ ದಾಳಿಗಳಿಗೆಲ್ಲ ಹೆದರುವುದಿಲ್ಲ, ತಮ್ಮ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುನರುಚ್ಛರಿಸಿದ್ದಾರೆ.
ನಿನ್ನೆ ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಗೆಹ್ಲೋಟ್ , ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ, ಇಡಿ, ಸಿಬಿಐ ಮತ್ತು ಐಟಿ ಇಲಾಖೆಗಳು ಸಕ್ರಿಯವಾಗಿ ನಮ್ಮ ರಾಜ್ಯದಲ್ಲಿ ದಾಳಿ ಮಾಡುತ್ತಿರಬಹುದು, ಆದರೆ ಅದಕ್ಕೆ ಹೆದರುವುದಿಲ್ಲ ಎಂದರು.
ಇಂತವರು ಪ್ರಜಾಪ್ರಭುತ್ವವನ್ನು ಹಾಳು ಮಾಡಲು ನೋಡುತ್ತಿದ್ದಾರೆ. ನಮ್ಮ ಸಹೋದ್ಯೋಗಿಗಳಿಗೆ ತಪ್ಪು ಮಾಹಿತಿ ನೀಡಬಹುದು ಆದರೆ ಜನರು ಅವರನ್ನೆಂದಿಗೂ ಕ್ಷಮಿಸುವುದಿಲ್ಲ ಎಂದು ಸರ್ಕಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


