ದೇಶಾದ್ಯಂತ ಒಂದೇ ದಿನ ದಾಖಲೆಯ 49,310 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 1.28 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣದಲ್ಲಿ ಶುಕ್ರವಾರ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣದಲ್ಲಿ ಶುಕ್ರವಾರ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 740 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 30,601ಕ್ಕೆ ತಲುಪಿದೆ.
ಇನ್ನು 12,87,945 ಮಂದಿ ಸೋಂಕಿತರ ಪೈಕಿ 8,17,209 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 4,40,135 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ನಿನ್ನೆ 9,896 ಕೇಸ್, 298 ಸಾವು, ತಮಿಳುನಾಡಿನಲ್ಲಿ 6472, ಹೊಸ ಕೇಸ್, 88 ಮಂದಿ ಸಾವು, ಕರ್ನಾಟಕದಲ್ಲಿ 5,030 ಕೊರೋನಾ ಕೇಸ್, 97 ಸಾವು, ಆಂಧ್ರಪ್ರದೇಶ ದಾಖಲೆಯ 7,998 ಕೇಸ್, 61 ಸಾವು, ಕೇರಳದಲ್ಲಿ 1078 ಹೊಸ ಪ್ರಕರಣ, 5 ಮಂದಿ ಸಾವು ದಾಖಲಾಗಿದೆ.
ಬಹುತೇಕ ರಾಜ್ಯಗಳಲ್ಲಿ ರೋಗ ಪತ್ತೆ ಪ್ರಮಾಣವನ್ನು ಹಲವು ಪಟ್ಟು ಹೆಚ್ಚಳ ಮಾಡಲಾಗಿದೆ. ಹೀಗಾಗಿ ಹೊಸ ಸೋಂಕಿತರು ಪತ್ತೆಯಾಗುವ ಪ್ರಮಾಣ ಕೂಡ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


