ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ವೈರಸ್ ನಿಂದ ಮರಣ ಪ್ರಮಾಣ ತೀರಾ ಕಡಿಮೆ: ಕೇಂದ್ರ ಸಚಿವ ಹರ್ಷವರ್ಧನ್
ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ನವದೆಹಲಿ: ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.
ದೇಶದಲ್ಲಿ ದಿನೇ ದಿನೇ ಏರಿಕೆಯಾಗುತ್ತಿರುವ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹಿನ್ನಲೆಯಲ್ಲಿ ಇಂದು ಸುದ್ದಿಗೋಷ್ಛಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಡಾ.ಹರ್ಷವರ್ಧನ್ ಅವರು, ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಇದೆ. ದೇಶದಲ್ಲಿ ಈ ವರೆಗೂ 1.25 ಮಿಲಿಯನ್ ಕೊರೋನಾ ಸೋಂಕು ಪ್ರಕರಣಗಳಿದ್ದು, 30 ಸಾವಿರ ಸಾವಿನ ಸಂಖ್ಯೆ ಇದೆ. ಜಗತ್ತಿನ ಇತರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ತೀರಾ ಕಡಿಮೆ ಇದ್ದು, ಭಾರತದಲ್ಲಿ ಕೊರೋನಾ ವೈರಸ್ ಮರಣ ಪ್ರಮಾಣ ಕೇವಲ ಶೇ.2.3ರಷ್ಟಿದೆ ಎಂದು ಹೇಳಿದರು.
ಅಂತೆಯೇ ಭಾರತದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಿದ್ದು, ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ.63.45ಕ್ಕೆ ಏರಿಕೆಯಾಗಿದೆ. ಈ ವರೆಗೂ 15 ಮಿಲಿಯನ್ ಗೂ ಅಧಿಕ ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗಿದ್ದು, ಪ್ರತಿ ನಿತ್ಯ 0.35ಮಿಲಿಯನ್ ಕೋವಿಡ್ ನಡೆಸಲಾಗುತ್ತಿದೆ. ಈ ಪ್ರಮಾಣವನ್ನು ದಿನಕ್ಕೆ 1 ಮಿಲಿಯನ್ ಟೆಸ್ಚ್ ಗಳಿಗೆ ಏರಿಕೆ ಮಾಡುವ ಗುರಿ ಇದೆ ಎಂದು ಸಚಿವರು ಹೇಳಿದರು.
ದೇಶಾದ್ಯಂತ ಒಂದೇ ದಿನ ದಾಖಲೆ ಪ್ರಮಾಣದಲ್ಲಿ ಸೋಂಕಿತರ ಏರಿಕೆ
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 49,310 ಮಂದಿಯಲ್ಲಿ ಹೊಸದಾಗಿ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದ್ದು, ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 740 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 30,601ಕ್ಕೆ ತಲುಪಿದೆ. 12,87,945 ಮಂದಿ ಸೋಂಕಿತರ ಪೈಕಿ 8,17,209 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 4,40,135 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


