ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 3,52,801 ಕೋವಿಡ್ ಪರೀಕ್ಷೆ, ಜುಲೈ 23ರವರೆಗೆ ಒಟ್ಟಾರೆ 1,54,28,170 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 3,52,801 ಕೋವಿಡ್ ಪರೀಕ್ಷೆ, ಜುಲೈ 23ರವರೆಗೆ ಒಟ್ಟಾರೆ 1,54,28,170 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ಸಂಗ್ರಹ ಚಿತ್ರ
Published On :

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 3,50,823 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,52,801 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.22ರವರೆಗೂ 1,54,28,170 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ನಡುವೆ ದೇಶದಲ್ಲಿ ಕೊರೋನಾ ಆರ್ಭಟ ಮತ್ತಷ್ಟು ತೀವ್ರಗೊಂಡಿದ್ದು, ಒಂದೇ ದಿನ ದಾಖಲೆಯ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದರೊಂದಿಗೆ ದೇಶದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ನಿನ್ನೆ ಒಂದೇ ದಿನ 740 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 30,601ಕ್ಕೆ ತಲುಪಿದೆ. 

ಇನ್ನು 12,87,945 ಮಂದಿ ಸೋಂಕಿತರ ಪೈಕಿ 8,17,209 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿನ್ನೂ 4,40,135 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.