ಕೋವಿಡ್ ಸಂಕಷ್ಟವನ್ನು ಲಾಭವಾಗಿ ಪರಿವರ್ತಿಸಿಕೊಂಡಿದೆ, ಇದು ಬಡಜನ ವಿರೋಧಿ ಸರ್ಕಾರ: ರಾಹುಲ್ ಟೀಕೆ
ಕೇಂದ್ರ ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ನಾಗರಿಕರ ವೆಚ್ವದಲ್ಲಿ ಸರ್ಕಾರ ಲಾಭ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಹೊಸ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೋವಿಡ್ ಸಂಕಷ್ಟದ ಸಮಯದಲ್ಲಿ ನಾಗರಿಕರ ವೆಚ್ವದಲ್ಲಿ ಸರ್ಕಾರ ಲಾಭ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ದೇಶದಲ್ಲಿ ಆಗಸದಲ್ಲಿ ತುಂಬಿರುವ ಮೋಡಗಳಂತೆ ಕಾಯಿಲೆಗಳಿವೆ, ಜನರು ಕಷ್ಟದಲ್ಲಿದ್ದಾರೆ. ಆದರೆ, ಬಡಜನ ವಿರೋಧಿ ಸರ್ಕಾರ ಈ ಸಂಕಷ್ಟವನ್ನು ಲಾಭ ಮಾಡಿಕೊಳ್ಳುವ ಅವಕಾಶವನ್ನಾಗಿ ಬದಲಾಯಿಸಿ ಆದಾಯ ಪಡೆದುಕೊಳ್ಳುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
ಶ್ರಮಿಕ ವಿಶೇಷ ರೈಲುಗಳ ಮೂಲಕ ರೈಲ್ವೆ 428 ಕೋಟಿ ರೂ. ಆದಾಯ ಗಳಿಸಿದೆ ಎಂಬ ವರದಿಯನ್ನು ರಾಹುಲ್ ತಮ್ಮ ಟ್ವಿಟರ್ ಖಾತೆಯೊಂದಿಗೆ ಲಗತ್ತಿಸಿದ್ದಾರೆ.
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಕೇಂದ್ರ ಸರ್ಕಾರ ಕೋವಿಡ್ ದುರಂತವನ್ನು ನಿಭಾಯಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


