ಮಹಾರಾಷ್ಟ್ರ: ಒಟ್ಟು 8200 ಪೊಲೀಸರಿಗೆ ಕೊರೋನಾ, 93 ಸಾವು
ಮಹಾರಾಷ್ಟ್ರದಲ್ಲಿ ಈವರೆಗೂ 8,200 ಪೊಲೀಸರಿಗೆ ಕೊರೋನಾವೈರಸ್ ಸೋಂಕು ತಗುಲಿದ್ದು, ಏಳು ಅಧಿಕಾರಿಗಳುಸೇರಿದಂತೆ 93 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಈವರೆಗೂ 8,200 ಪೊಲೀಸರಿಗೆ ಕೊರೋನಾವೈರಸ್ ಸೋಂಕು ತಗುಲಿದ್ದು, ಏಳು ಅಧಿಕಾರಿಗಳು
ಸೇರಿದಂತೆ 93 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಅಧಿಕೃತ ಮಾಹಿತಿ ಪ್ರಕಾರ, ನಿಷೇಧಾಜ್ಞೆ ಜಾರಿಯಾಗುತ್ತಿರುವಂತೆ ಈವರೆಗೂ ಸುಮಾರು 8,200 ಪೊಲೀಸರಿಗೆ
ಕೊರೋನಾ ಸೋಂಕು ತಗುಲಿದೆ. ಈ ಪೈಕಿ 6,314 ಜನರು ಗುಣಮುಖರಾಗಿದ್ದಾರೆ.
ಪ್ರಸ್ತುತ 214 ಅಧಿಕಾರಿಗಳು ಸೇರಿದಂತೆ ಒಟ್ಟಾರೇ 1, 1611 ಸಿಬ್ಬಂದಿಗೆ ಸೋಂಕು ತಗುಲಿದ್ದು,ವಿವಿಧ ಆಸ್ಪತ್ರೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಮುಂಬೈನಲ್ಲಿಯೇ 52 ಪೊಲೀಸರು ಮೃತಪಟ್ಟಿದ್ದು, ಒಟ್ಟಾರೇ 93 ಸಾವಿನ ವರದಿಯಾಗಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಕೊರೋನಾವೈರಸ್ ಲಾಕ್ ಡೌನ್ ಜಾರಿಯಾದ ಮಾರ್ಚ್ 22ರಿಂದಲೂ ಈವರೆಗೂ ಕನಿಷ್ಠ 2,07,543 ಅಪರಾಧ ಪ್ರಕರಣಗಳು ದಾಖಲಾಗಿದ್ದು, ಲಾಕ್ ಡೌನ್ ನಿಯಮ ಉಲ್ಲಂಘನೆಯಲ್ಲಿ 37, 671 ಮಂದಿಯನ್ನು ಪೊಲೀಸರು ಬಂಧಿಸಿರುವುದಾಗಿ ಅವರು ತಿಳಿಸಿದ್ದಾರೆ.ಇದಲ್ಲದೆ ಲಾಕ್ ಡೌನ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಈವರೆಗೂ 16.87 ಕೋಟಿ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


