ರಾಜಧಾನಿ ದೆಹಲಿಯಲ್ಲಿ ತಗ್ಗಿದ ಕೊರೋನಾ ಅಬ್ಬರ, ಇಂದು 1075 ಹೊಸ ಪಾಸಿಟಿವ್ ಕೇಸ್ ದಾಖಲು
ರಾಷ್ಟ್ರ ರಾಜಧಾನಿ ದೆಹಲಿ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವತ್ತ ದಾಪುಗಾಲಿರಿಸಿದ್ದು, ದೆಹಲಿಯಲ್ಲಿ ಇಂದು ಹೊಸದಾಗಿ 1075 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರುವತ್ತ ದಾಪುಗಾಲಿರಿಸಿದ್ದು, ದೆಹಲಿಯಲ್ಲಿ ಇಂದು ಹೊಸದಾಗಿ 1075 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.
ಅಂತೆಯೇ ದೆಹಲಿಯಲ್ಲಿ ತಾರಕಕ್ಕೇರಿದ್ದ ಕೊರೋನಾ ಸೋಂಕಿತರ ಮರಣ ಸಂಖ್ಯೆ ಕೂಡ ಗಣನೀಯವಾಗಿ ಕುಸಿದಿದ್ದು, ಇಂದು ದೆಹಲಿಯಲ್ಲಿ 21 ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ದೆಹಲಿಯಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3827ಕ್ಕೆ ಏರಿಕೆಯಾಗಿದೆ.
ಕೊರೋನಾ ಗುಣಮುಖರ ಪ್ರಮಾಣ ಶೇ.87ಕ್ಕೆ ಏರಿಕೆ
ಇನ್ನು ಕೊರೋನಾ ಸೋಂಕಿತರ ಗುಣಮುಖರ ಪ್ರಮಾಣ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ದೆಹಲಿಯಲ್ಲಿ ಪ್ರಸ್ತುತ ಗುಣಮುಖರ ಪ್ರಮಾಣ ಶೇ.87ರಷ್ಟಿದೆ. ಈ ಬಗ್ಗೆ ದೆಹಲಿ ಆರೋಗ್ಯ ಇಲಾಖೆ ಇಂದು ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಭಾನುವಾರ ಕೊರೋನಾ ಸೋಂಕಿತರ ಗುಣಮುಖರ ಪ್ರಮಾಣ ಶೇ.87.29ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಇಂದು 1075 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ದೆಹಲಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,30,606ಕ್ಕೆ ಏರಿಕೆಯಾಗಿದೆ. ಅಂತೆಯೇ ದೇಹಲಿಯಲ್ಲಿ ಇಂದು ಒಂದೇ ದಿನ 21 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೆಹಲಿಯಲ್ಲಿ ಕೊರೋನಾ ಸಾವಿನ ಸಂಖ್ಯೆ 3827 ಕ್ಕೆ ಏರಿಕೆಯಾಗಿದೆ.
ದೆಹಲಿಯಲ್ಲಿ ಒಟ್ಟಾರೆ 1,30,606 ಪ್ರಕರಣಗಳ ಪೈಕಿ ಈ ವರೆಗೂ 87.29 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ದೆಹಲಿಯಲ್ಲಿ 1,14,875 ಸೋಂಕಿತರು ಗುಣಮುಖರಾಗಿದ್ದು, 11904 ಸೋಂಕಿತರು ಮಾತ್ರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


