ದೇಶ

ಭಾರತದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ 48,661 ಮಂದಿಯಲ್ಲಿ ವೈರಸ್ ಪತ್ತೆ, 1.38 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುರೆಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,661 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ 48,661 ಮಂದಿಯಲ್ಲಿ ವೈರಸ್ ಪತ್ತೆ, 1.38 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುರೆಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,661 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಇನ್ನು ನಿನ್ನೆ ಒಂದೇ ದಿನ 705 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 32,063ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇನ್ನು 13,85,522 ಮಂದಿ ಸೋಂಕಿತರ ಪೈಕಿ 8,85,577 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿನ್ನೂ 4,67,882 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಒಂದೆಡೆ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೂ ಗುಣಮುಖರಾಗುತ್ತಿರುವ ಪ್ರಮಾಣವೂ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ. 

ಇನ್ನು ಮಹಾರಾಷ್ಟ್ರದಲ್ಲಿ 9,251 ಕೇಸ್, 257 ಸಾವು, ತಮಿಳುನಾಡಿನಲ್ಲಿ 6,988 ಕೇಸ್, 89 ಸಾವು, ಆಂಧ್ರಪ್ರದೇಶದಲ್ಲಿ 7,813 ಕೇಸ್, 52 ಸಾವು, ಕರ್ನಾಟಕದಲ್ಲಿ 5072 ಕೇಸ್, 72 ಸಾವು, ಕೇರಳದಲ್ಲಿ 1,103 ಕೇಸ್, 5 ಸಾವು ಸಂಭವಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.