ರಾಜಸ್ತಾನ ರಾಜಕೀಯ ಬಿಕ್ಕಟ್ಟು: ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್: ಸಿಎಂ ಅಶೋಕ್ ಗೆಹ್ಲೋಟ್ ಎಚ್ಚರಿಕೆ
ರಾಜಸ್ತಾನ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ ಬೆನ್ನಲ್ಲಿಯೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಸಿಎಂ ಅಶೋಕ್ ಗೆಹ್ಲೋಟ್ ಅವರು, ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜೈಪುರ: ರಾಜಸ್ತಾನ ರಾಜಕೀಯ ಬಿಕ್ಕಟ್ಟು ತಾರಕ್ಕೇರಿದ ಬೆನ್ನಲ್ಲಿಯೇ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮುಂದುವರೆಸಿರುವ ಸಿಎಂ ಅಶೋಕ್ ಗೆಹ್ಲೋಟ್ ಅವರು, ಅಗತ್ಯ ಬಿದ್ದರೆ ಪ್ರಧಾನಿ ನಿವಾಸಕ್ಕೂ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನ ರಾಜಭವನದ ಮುಂದೆಯೇ ಶನಿವಾರ ಧರಣಿ ಕೂತಿದ್ದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಇದೀಗ, ಅನಿವಾರ್ಯತೆ ಸೃಷ್ಟಿಯಾದರೆ ಕಾಂಗ್ರೆಸ್ ಶಾಸಕರು ರಾಷ್ಟ್ರಪತಿಗಳನ್ನು ಭೇಟಿಯಾಗುತ್ತೇವೆ. ಅಗತ್ಯಬಿದ್ದರೆ ಪ್ರಧಾನಿ ನಿವಾಸದ ಮುಂದೆಯೂ ಧರಣಿ ಕೂರಲಿದ್ದಾವೆ ಎಂದು ಹೇಳಿದ್ದಾರೆ.
ಶನಿವಾರ ಕಾಂಗ್ರೆಸ್ ಶಾಸಕಾಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅಶೋಕ್ ಗೆಹ್ಲೋಟ್ ಅವರು, ಹೋಟೆಲ್‌ನಲ್ಲಿ ಹೆಚ್ಚು ಸಮಯ ಉಳಿಯಲು ಸಿದ್ಧರಾಗಿ. ಅಗತ್ಯಬಿದ್ದರೆ, ನಾವು ರಾಷ್ಟ್ರಪತಿಯನ್ನು ಭೇಟಿಯಾಗಲು ಹೋಗಲಿದ್ದೇವೆ ಮತ್ತು ಪ್ರಧಾನ ಮಂತ್ರಿಯ ನಿವಾಸದ ಹೊರಗೆ ಧರಣಿ ನಡೆಸಲಿದ್ದೇವೆ ಎಂದು ತಮ್ಮ ಪಕ್ಷದ ಶಾಸಕರಿಗೆ ಹೇಳಿದ್ದಾರೆ.
ಶುಕ್ರವಾರ ಅಧಿವೇಶನ ಕರೆಯಲು ರಾಜ್ಯಪಾಲ ಕಲ್ರಾಜ್ ಮಿಶ್ರಾ ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ರಾಜಭವನದ ಮುಂಭಾಗದ ಹುಲ್ಲುಹಾಸಿನ ಮೇಲೆ ಧರಣಿ ಕುಳಿತಿದ್ದರು. ಜೊತೆಗೆ ಅಧಿವೇಶನ ಕರೆಯಿರಿ ಎಂದು ಘೋಷಣೆಗಳನ್ನೂ ಕೂಗಿದ್ದರು. ನಂತರ ಶುಕ್ರವಾರ ರಾತ್ರಿ ಧರಣಿಯನ್ನು ವಾಪಸ್ ಪಡೆಯಲಾಗಿತ್ತು. ಆದರೆ ಗೆಹ್ಲೋಟ್ ಅವರ ಯಾವುದೇ ಪ್ರಯತ್ನಗಳೂ ಫಲಿಸುತ್ತಿಲ್ಲ. ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಕೊನೆಯಾಗುತ್ತಿಲ್ಲ.
Related Article
ದೇಶವನ್ನು ಲೂಟಿ ಮಾಡಿದವರು ಸಬ್ಸಿಡಿಯನ್ನು ಲಾಭ ಎಂದು ಕರೆಯುತ್ತಾರೆ:ರಾಹುಲ್ ಗಾಂಧಿಗೆ ಪಿಯೂಷ್ ಗೋಯಲ್ ತಿರುಗೇಟು
ರಾಜಸ್ಥಾನ ರಾಜಕೀಯ ಬಿಕ್ಕಟ್ಟು: 13 ಸದಸ್ಯರನ್ನೊಳಗೊಂಡ ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ
ಅಧಿವೇಶನ ಕರೆಯಲು ರಾಜ್ಯಪಾಲರಿಗೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಲು ರಾಜಸ್ತಾನ ಸರ್ಕಾರ ನಿರ್ಧಾರ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


