ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 49,931 ಕೊರೋನಾ ಕೇಸ್; ಸೋಂಕಿತರ ಸಂಖ್ಯೆ 14 ಲಕ್ಷ, 32,771 ಮಂದಿ ಸಾವು

ದೇಶದಲ್ಲಿ ಸೋಮವಾರ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 49,931 ಕೊರೋನಾ ಕೇಸ್; ಸೋಂಕಿತರ ಸಂಖ್ಯೆ 14 ಲಕ್ಷ, 32,771 ಮಂದಿ ಸಾವು
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಸೋಮವಾರ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಮತ್ತೊಂದೆ ಒಂದೇ ದಿನ 708 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಮೃತರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇನ್ನು 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 4,85,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

ಇನ್ನು 3,75,799 ಸೋಂಕಿತರು ಹಾಗೂ 13,656 ಸಾವಿನೊಂದಿಗೆ ದೇಶದಲ್ಲೇ ಸೋಂಕು ಹಾಗೂ ಸಾವಿನಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ. 2,13,723 ಸೋಂಕಿತರೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.