ದೇಶ

ಪಕ್ಷದ ಶಾಸಕರು ಕಾಂಗ್ರೆಸ್ ನಲ್ಲಿ ವಿಲೀನ: ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್ ಪಿ

ರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಪಕ್ಷದ ಶಾಸಕರು ಕಾಂಗ್ರೆಸ್ ನಲ್ಲಿ ವಿಲೀನ: ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್ ಪಿ
ಮಾಯಾವತಿ
Published On :

ಜೈಪುರ: ರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ ಚಂದ್ ಖಾರಿಯಾ, ಲಖನ್ ಮೀನಾ, ಜೋಗೇಂದ್ರ ಅಹ್ವಾನ ಮತ್ತು ರಾಜೇಂದ್ರ ಗುದಾ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಪಿ ಟಿಕೆಟ್ ನಿಂದ ಗೆಲುವು ಸಾಧಿಸಿದ್ದರು. ಅವರು ಸೆಪ್ಟೆಂಬರ್ 2019 ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

ಬಿಎಸ್ ಪಿ ಶಾಸಕರು ಕಾಂಗ್ರೆಸ್ ಜೊತೆ ವಿಲೀನವಾಗಿರುವ ಸಂಬಂಧ ನಾವು ಇಂದು ರಾಜಸ್ತಾನ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು ರಾಜಸ್ತಾನ ಬಿಎಸ್ ಪಿ ಅಧ್ಯಕ್ಷ ಬಗ್ವಾನ್ ಸಿಂಗ್ ಬಾಬಾ ಹೇಳಿದ್ದಾರೆ.

ಇದರ ಜೊತೆಗೆ ನಾವು ವಿಧಾನಸಭೆ ಸ್ಪೀಕರ್ ಗೂ ವಿಲೀನ ಪ್ರಶ್ನಿಸಿ ಅರ್ಜಿ ಸಲ್ಲಿಸುತ್ತೇವೆ  ಮತ್ತು ವಿಲೀನವನ್ನು ರದ್ದುಗೊಳಿಸಲು ಕೋರಿದ್ದೇವೆ ಎಂದು ಹೇಳಿದ್ದಾರೆ.

ತಮ್ಮ ದೂರಿನ ಮೇರೆಗೆ ವಿಧಾನಸಭೆ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಮದನ್ ದಿಲಾವರ್ ಮಂಗಳವಾರ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.